ಮಂಗಳವಾರ, ಸೆಪ್ಟೆಂಬರ್ 21, 2021
20 °C

ಕೆಎಲ್‌ಎಸ್‌–ಗೋಗಟೆ ತಾಂತ್ರಿಕ ವಿಶ್ವವಿದ್ಯಾಲಯದ ಕೃಷ್ಣಶೇಖರಗೆ ಪ್ರಶಂಸಾಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಕೆಎಲ್‌ಎಸ್‌–ಗೋಗಟೆ ತಾಂತ್ರಿಕ ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಡೀನ್ ಡಾ.ಕೃಷ್ಣಶೇಖರ್ ಲಾಲ್ ದಾಸ್ ಅವರು ಅಮೆರಿಕದ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಇತ್ತೀಚೆಗೆ ನಡೆಸಿದ ಶೈಕ್ಷಣಿಕ ನಾಯಕತ್ವ ಕಾರ್ಯಕ್ರಮದಲ್ಲಿ ಪ್ರಶಂಸಾಪತ್ರ ಪಡೆದಿದ್ದಾರೆ.

‘ಪ್ರಪಂಚದಾದ್ಯಂತದ ಶೈಕ್ಷಣಿಕ ನಾಯಕರು 10 ವಾರಗಳ ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಓದುವಿಕೆ ಮತ್ತು ಹಿನ್ನೆಲೆ ಸಂಶೋಧನೆ, ಚುರುಕಾದ ಗುರಿಗಳನ್ನು ಹೊಂದಿಸುವುದು, ನೆಟ್‌ವರ್ಕಿಂಗ್, ಶೈಕ್ಷಣಿಕ ಸಮಸ್ಯೆಗಳಿಗೆ ಕಾರ್ಯಸಾಧ್ಯವಾದ ಪರಿಹಾರಗಳನ್ನು ಒದಗಿಸುವುದು ಮತ್ತು  ಪಾಠಗಳನ್ನು ವಿನ್ಯಾಸಗೊಳಿಸುವ ಚಟುವಟಿಕೆಗಳನ್ನು ಕಾರ್ಯಕ್ರಮ ಒಳಗೊಂಡಿತ್ತು. ಅವರನ್ನು ಕೆಎಲ್‌ಎಸ್‌ ಅಧ್ಯಕ್ಷ ಎಂ.ಆರ್. ಕುಲಕರ್ಣಿ ಮತ್ತು ಪ್ರಾಂಶುಪಾಲ ಡಾ.ಜಯಂತ್ ಕಿತ್ತೂರು ಅಭಿನಂದಿಸಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು