ಬುಧವಾರ, ಮಾರ್ಚ್ 3, 2021
18 °C

ಸಂಡೂರಿನ ವ್ಯಕ್ತಿ ಕೋವಿಡ್ ಲಸಿಕೆಯಿಂದ ಮೃತಪಟ್ಟಿಲ್ಲ: ಡಾ.ಕೆ. ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ವ್ಯಕ್ತಿಯೊಬ್ಬರು ಕೋವಿಡ್ ಲಸಿಕೆ ತೆಗೆದುಕೊಂಡ ಬಳಿಕ ಮೃತರಾದರು ಎನ್ನುವುದು ವದಂತಿಯಷ್ಟೆ. ಅವರಿಗೆ ಮಧುಮೇಹ ನ್ಯೂನತೆ ಇತ್ತು. ತೀವ್ರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟಪಡಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಲಸಿಕೆ ಪಡೆದ ಬಳಿಕ ಅವರಿಗೆ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇವೆ. ಲಸಿಕೆಯ ಅಡ್ಡ ಪರಿಣಾಮದಿಂದ ಹೀಗಾಗಿದೆ ಎಂದು ನನಗೆ ಅನಿಸುತ್ತಿಲ್ಲ’ ಎಂದರು.

‘ಇದುವರೆಗೆ ರಾಜ್ಯದಲ್ಲಿ 30 ಸಾವಿರ ಜನರು ಲಸಿಕೆ ತೆಗೆದುಕೊಂಡಿದ್ದಾರೆ. ಯಾರಿಗೂ ಅಡ್ಡ ಪರಿಣಾಮ ಆಗಿಲ್ಲ. 1ನೇ ಹಂತದಲ್ಲಿ ಯಶಸ್ವಿಯಾದ ಬಳಿಕ 2ನೇ  ಹಂತಕ್ಕೆ ಹೋಗುತ್ತೇವೆ. ರಾಜ್ಯದಲ್ಲಿ ದಿನಕ್ಕೆ 80 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ ನೀಡಿದ್ದೇವೆ’ ಎಂದು ತಿಳಿಸಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು. ‘ಅವರು ನನ್ನ ಬಗ್ಗೆ ಮಾತನಾಡಿದ್ದಾರಾ?’ ಎಂದು ಕೇಳಿದರು.

‘ನಾನು ನನ್ನ ಕೆಲಸದಲ್ಲಿ ತೊಡಗಿದ್ದೇನೆ. ರಾಜ್ಯದ ಜನರ ಆರೋಗ್ಯವೇ ಮುಖ್ಯ. ಹೀಗಾಗಿ, ಕೋವಿಡ್ ಲಸಿಕೆ ಮೊದಲಾದ ಕಾರ್ಯದಲ್ಲಿ ನಿಗಾ ವಹಿಸಿದ್ದೇನೆ. ನಾನು ರಾಜಕೀಯ ಮಾಡುವುದಿಲ್ಲ’ ಎಂದರು.

ಇದನ್ನೂ ಓದಿ: 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು