ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಬಾಗ: ಜಲ ಜೀವನ ಮಿಷನ್ ಯೋಜನೆಗೆ ಚಾಲನೆ

Last Updated 19 ಜುಲೈ 2021, 12:44 IST
ಅಕ್ಷರ ಗಾತ್ರ

ರಾಯಬಾಗ: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಸುವ ಸದುದ್ದೇಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಜಲ ಜೀವನ ಮಿಷನ್‌ ಯೋಜನೆಯನ್ನು ರಾಯಬಾಗ ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರಿನ ಸರಬರಾಜು ಯೋಜನಾಧಿಕಾರಿ ಪದ್ಮಜಾ ಪಾಟೀಲ ಹೇಳಿದರು.

ತಾಲ್ಲೂಕಿನ ದೇವನಕಟ್ಟಿಯಲ್ಲಿ ₹ 24.14 ಲಕ್ಷ, ಮಂಟೂರ ಗ್ರಾಮದಲ್ಲಿ ₹ 1.37 ಕೋಟಿ ಮತ್ತು ನಿಪನಾಳ ಗ್ರಾಮದಲ್ಲಿ ₹ 1.96 ಕೋಟಿ ವೆಚ್ಚದಲ್ಲಿ ಜಲ ಜೀವನ ಮಿಷನ್‌ ಯೋಜನೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

ಶಾಸಕ ದುರ್ಯೋಧನ ಐಹೊಳೆ ಮಾತನಾಡಿ, ‘ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದರ್ಶಿತ್ವದ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಸೃಷ್ಟಿಯಾಗದಿರಲು ಈ ಯೋಜನೆಯನ್ನು ರಾಯಬಾಗ ಮತಕ್ಷೇತ್ರದಲ್ಲಿ ಅನುಷ್ಠಾನಗೊಳಿಸುತ್ತಿದ್ದೇವೆ’ ಎಂದರು.

ಈ ಸಂದರ್ಭದಲ್ಲಿ ನಿಂಗಪ್ಪ ಪಕಾಂಡಿ, ಮಹೇಶ ಕರಮಡಿ, ಅಪ್ಪಾಸಾಬ ದೇಸಾಯಿ, ರಾವಸಾಬ ದೇಸಾಯಿ, ಸದಾನಂದ ಪಾಟೀಲ, ಮುತ್ತಪ್ಪ ನಾಯಿಕ, ವಸಂತ ಬೆಂಡವಾಡೆ ಮತ್ತು ಪಾಂಡುರಂಗ ದೇಸಾಯಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT