ಬೆಳಗಾವಿ: ‘ಬೆಳಗಾವಿ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಜನರ ಅನುಕೂಲಕ್ಕಾಗಿ ಸತೀಶ ಜಾರಕಿಹೊಳಿ ಫೌಂಡೇಷನ್ ವತಿಯಿಂದ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಲಾಗುತ್ತಿದೆ ಎಂದು ಫೌಂಡೇಷನ್ ಮುಖಂಡ ರಾಹುಲ್ ಜಾರಕಿಹೊಳಿ ತಿಳಿಸಿದರು.

ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸತೀಶ ಜಾರಕಿಹೊಳಿ ಫೌಂಡೇಷನ್ನಿಂದ ನೀಡಲಾದ ಉಚಿತ ನೀರಿನ ಟ್ಯಾಂಕರ್ ಹಾಗೂ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸಚಿವ ಸತೀಶ ಜಾರಕಿಹೊಳಿ ಅವರ ಸಲಹೆ, ಸೂಚನೆ ಮೇರೆಗೆ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದ್ದೇವೆ. ಈಗ ಬೇಸಿಗೆ ಆರಂಭವಾಗುತ್ತಿದ್ದು, ಜನತೆಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಉಚಿತ ನೀರಿನ ಟ್ಯಾಂಕರ್ ನೀಡುತ್ತಿದ್ದೇವೆ. ನಗರ ಸ್ವಚ್ಛತೆಗಾಗಿ ಕಸ ವಿಲೇವಾರಿ ಮಾಡಲು ವಾಹನ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಕ್ಷೇತ್ರಗಳಿಗೂ ಎರಡೆರಡು ವಾಹನ ವಿತರಿಸಲು ಯೋಜನೆ ರೂಪಿಸಲಾಗಿದೆ’ ಎಂದು ತಿಳಿಸಿದರು.

ಶಾಸಕ ಆಸೀಫ್ ಸೇಠ್ ಮಾತನಾಡಿದರು. ಮಹಾನಗರ ಉಪ ಆಯುಕ್ತೆ ರಾಜೇಶ್ರಿ ಜೈನಾಪುರ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಜೆ.ಪ್ರದೀಪ್, ಕಿರಣ ಸಾಧುನ್ನವರ, ಕಿರಣ ಪಾಟೀಲ, ಪರಶುರಾಮ ಧಗೆ, ಅರವಿಂದ ಕಾರ್ಚಿ, ಆಯಿಷಾ ಸನದಿ, ಪ್ರಭಾವತಿ ಪಾಟೀಲ ಹಲವು ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.