ಶುಕ್ರವಾರ, ಅಕ್ಟೋಬರ್ 7, 2022
24 °C

ಬೈಲಹೊಂಗಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಚಾಲಕನಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೈಲಹೊಂಗಲ: ಪಟ್ಟಣದ ಇಂಚಲ ಕ್ರಾಸ್‌ ಬಳಿ ಶನಿವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ವಿದ್ಯುತ್‌ ಕಂಬ ಮುರಿದು ಮಳಿಗೆಗಳ ಮೇಲೆ ಬಿದ್ದಿದೆ. ಅದೃಷ್ಟವಶಾತ್‌ ಹೆಚ್ಚಿನ ಅವಘಡ ಸಂಭವಿಸಿಲ್ಲ.

ಕಾರಿನ ಟೈರ್‌ ಸಿಡಿದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್‌ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್‌ ಕಂಬ ಮುರಿದು ಮುದ್ದಿದೆ. ವಿದ್ಯುತ್‌ ಪ್ರವಹಿಸುತ್ತಿದ್ದ ತಂತಿಗಳು ಪಕ್ಕದ ಮಳಿಗೆಗಳ ಮೇಲೆ ಜೋತು ಬಿದ್ದವು. ಅವುಳಿಂದ ಬೆಂಕಿ ಕಿಡಿಗಳು ಹಾರಿದವು. ಕೆಲ ಗಂಟೆಗಳ ನಂತರ ವಿದ್ಯುತ್‌ ಕಡಿತಗೊಳಿಸಲಾಯಿತು. ಸಂಭವನೀಯ ಅವಘಡ ತಪ್ಪಿತು.

ಈ ಬಗ್ಗೆ ಭಾನುವಾರ ಬೆಳಗಿನವರೆಗೂ ಪ್ರಕರಣ ದಾಖಲಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು