ಶನಿವಾರ, ಜುಲೈ 31, 2021
28 °C

ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತ ಇಳಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಸಂಚಾರ ನಿಯಮ ಉಲ್ಲಂಘಿಸಿದರೆ ವಿಧಿಸಲಾಗುವ ದಂಡದ ಮೊತ್ತವನ್ನು ಇಳಿಕೆ ಮಾಡಬೇಕು’ ಎಂದು ಒತ್ತಾಯಿಸಿ ಜೈ ಭೀಮ್‌  ಓಂ ಸಾಯಿ ವಾಣಿಜ್ಯ ವಾಹನ ಮಾಲೀಕರು ಹಾಗೂ ಚಾಲಕರ ಸಂಘದವರು ಗುರುವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.

‘ಹೆಚ್ಚಿನ ದಂಡ ವಿಧಿಸುತ್ತಿರುವುದರಿಂದ ವಾಹನಗಳ ಮಾಲೀಕರಿಗೆ ತೊಂದರೆಯಾಗುತ್ತಿದೆ. ವಾಹನಗಳ ಎಲ್ಲ ದಾಖಲೆಗಳು ಸರಿಯಾಗಿದ್ದರೂ ಪೊಲೀಸರು ಅಥವಾ ಆರ್‌ಟಿಒದವರು ನಿಯಮ ಉಲ್ಲಂಘನೆಯಾಗಿದೆ ಎಂದು ಏನಾದರೊಂದು ನೆಪ ಹೇಳಿ ದಂಡ ವಿಧಿಸುತ್ತಿದ್ದಾರೆ. ಹೀಗಾಗಿ, ನಾವು ದುಡಿಯುವ ಹಣದಲ್ಲಿ ಹೆಚ್ಚಿನ ಪ್ರಮಾಣವನ್ನು ದಂಡಕ್ಕೆಂದೇ ವಿನಿಯೋಗಿಸುವಂತಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.

‘ಟೋಲ್ ನಾಕಾದಲ್ಲಿ ಸ್ಥಳೀಯ ವಾಹನಗಳಿಗೆ ಒಂದು ಕಡೆಯಿಂದ ಮಾತ್ರ ಟೋಲ್ ತೆಗೆದುಕೊಳ್ಳಬೇಕು. ವಾಹನ ವಿಮೆ ಮೊತ್ತವನ್ನು ಕಡಿಮೆ ಮಾಡಬೇಕು’ ಎಂದು ಆಗ್ರಹಿಸಿದರು.

ಸಂಘದ ಸದಸ್ಯರಾದ ರಾಜು ಎಸ್., ಮಹಾದೇವ ಮಾನೆ, ರಾನಪ್ಪ ದೊಡ್ಡಮನಿ, ಸಂದೇಶ ಚೌಗಲೆ, ರಾಜು ಲೋಹರ್, ಅನಿಲ ತಬರಿ, ಬಾಲು ತಬರಿ, ಸುರೇಶ ತಳವಾರ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು