ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಸ್ಯೆ ಆಲಿಸದ ಕೇಂದ್ರ ತಂಡ: ಬೈಲಹೊಂಗಲದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೈತ

Published 6 ಅಕ್ಟೋಬರ್ 2023, 5:43 IST
Last Updated 6 ಅಕ್ಟೋಬರ್ 2023, 5:43 IST
ಅಕ್ಷರ ಗಾತ್ರ

ಬೆಳಗಾವಿ: ಕೇಂದ್ರ ಬರ ಅಧ್ಯಯನ ತಂಡವು ತಮ್ಮ ಸಮಸ್ಯೆ ಆಲಿಸಲಿಲ್ಲ ಎಂದು ಆಪಾದಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಕಲಕುಪ್ಪಿಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆಯಿತು.

ಅಪ್ಪಾಸಾಹೇಬ ಲಕ್ಕುಂಡಿ ಆತ್ಮಹತ್ಯೆಗೆ ಯತ್ನಿಸಿದವರು.

ಅಧಿಕಾರಿಗಳು ಕಲಕುಪ್ಪಿಯಲ್ಲಿ ಕೆಲವು ರೈತರ ಸಂಕಷ್ಟ ಆಲಿಸಿ, ಸವದತ್ತಿ ತಾಲ್ಲೂಕಿನ ಚಚಡಿಯತ್ತ ಹೊರಟರು. ಈ ವೇಳೆ ರೈತ ಕೀಟನಾಶಕದ ಬಾಟಲಿ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ. ಸ್ಥಳದಲ್ಲಿದ್ದ ಪೊಲೀಸರು ಆತನಿಂದ ಕೀಟನಾಶಕ ಬಾಟಲಿ ಕಸಿದುಕೊಂಡರು.

'ನಾನು 40 ಎಕರೆ ಭೂಮಿಯಲ್ಲಿ ಶೇಂಗಾ, ಹುರಳಿ, ಸೋಯಾಬೀನ್ ಬೆಳೆದಿದ್ದೇ‌ನೆ. ಮಳೆ‌ ಕೊರತೆಯಿಂದ ಬೆಳೆ ಸಂಪೂರ್ಣ ಹಾಳಾಗಿದೆ. ಆದರೆ, ಯಾರೂ ರೈತರ ಕಷ್ಟ ಕೇಳುತ್ತಿಲ್ಲ. ಸರ್ಕಾರ ಯಾವ ಗ್ಯಾಂರಟಿ ನೀಡದ್ದರಿಂದ ಮನನೊಂದು ನಾನು ಆತ್ಮಹತ್ಯೆಗೆ ಯತ್ನಿಸಿದೆ. ಸರ್ಕಾರ ರೈತರ ನೆರವಿಗೆ ಧಾವಿಸಬೇಕು' ಎಂದು ರೈತ ಅಪ್ಪಾಸಾಹೇಬ ಲಕ್ಕುಂಡಿ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT