‘ವಿಚಾರವಾದಿಗಳ ಹತ್ಯೆ: ತ‍‍ಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ’

7

‘ವಿಚಾರವಾದಿಗಳ ಹತ್ಯೆ: ತ‍‍ಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ’

Published:
Updated:
Deccan Herald

ಬೆಳಗಾವಿ: ‘ಸಂಶೋಧಕ ಎಂ.ಎಂ. ಕಲಬುರ್ಗಿ ಹಾಗೂ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದವರನ್ನು ತ್ವರಿತವಾಗಿ ಪತ್ತೆ ಹಚ್ಚಿ, ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿ ದಸಂಸ ಜಿಲ್ಲಾ ಶಾಖೆ ಸದಸ್ಯರು ಮಂಗಳವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.

‘ಆಟೊರಿಕ್ಷಾಗಳನ್ನು ಓಡಿಸುತ್ತಾ ಬಡತನದಲ್ಲೇ ಜೀವನ ನಡೆಸುತ್ತಿರುವವರಿಗೆ ಸರ್ಕಾರದಿಂದ ಮನೆ ನಿರ್ಮಿಸಿಕೊಡಬೇಕು. ಆಟೊ ಚಾಲಕರಿಗೆ ಪಿಂಚಣಿ, ಇಎಸ್ಐ ಕಾರ್ಡ್‌ ನೀಡಬೇಕು. ನೆರೆಯಿಂದ ಸಂತ್ರಸ್ತರಾದವರಿಗೆ ನಿರ್ಮಿಸಿರುವ ಕಾಲೊನಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸಬೇಕು. ಕುಡಚಿಯಲ್ಲಿ ತಾಲ್ಲೂಕು ಕೇಂದ್ರವೆಂದು ಘೋಷಿಸಬೇಕು’ ಎಂದು ಆಗ್ರಹಿಸಿದರು.

ಜಿಲ್ಲಾ ಸಂಚಾಲಕ ಎಸ್.ಪಿ. ತಳವಾರ ನೇತೃತ್ವ ವಹಿಸಿದ್ದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !