ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಯಮ ಉಲ್ಲಂಘನೆ: ವ್ಯಕ್ತಿ ಬಂಧನ

Last Updated 19 ಮೇ 2021, 14:03 IST
ಅಕ್ಷರ ಗಾತ್ರ

ಬೆಳಗಾವಿ: ನಗರದಲ್ಲಿ ‘ನ್ಯಾಯ ವಾಣಿ’ ಕನ್ನಡ ವಾರಪತ್ರಿಕೆಯ ಉಪ ಸಂಪಾದಕ ಎಂದು ಹೇಳಿಕೊಂಡು, ಲಾಕ್‌ಡೌನ್‌ ನಡುವೆಯೂ ಆಟೊರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಇಲ್ಲಿನ ಶಿಕ್ಷಕರ ಕಾಲೊನಿಯ ಉಲ್ಲಾಸ ಬಸವರಾಜ ಅದ್ವಾನಿ (26) ಬಂಧಿತ.

‘ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆ ನಡೆಸುವಾಗ, ಆ ವ್ಯಕ್ತಿಯು ನಾನು ಪತ್ರಕರ್ತ ಎಂದು ಹೇಳಿಕೊಂಡಿದ್ದರು. ಪರಿಶೀಲಿಸಿದಾಗಅವಧಿ ಮುಗಿದ ಗುರುತಿನ ಚೀಟಿ ಇಟ್ಟುಕೊಂಡಿದ್ದು ಗಮನಕ್ಕೆ ಬಂದಿದೆ. ಆಟೊರಿಕ್ಷಾ ಮತ್ತು ಆ ಗುರುತಿನ ಚೀಟಿ ವಶಪಡಿಸಿಕೊಳ್ಳಲಾಗಿದೆ. ಖಡೇಬಜಾರ್‌ ಪೊಲೀಸ್‌ ಠಾಣೆಯಲ್ಲಿ ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಲಾಕ್‌ಡೌನ್‌ ನಡುವೆಯೂ, ಕಾಲೇಜು ರಸ್ತೆಯಲ್ಲಿ ತೆರೆದಿದ್ದ ‘ದೇಸಿ ಚಾಯ್‌ವಾಲಾ’ ಎನ್ನುವ ಚಹಾ ಅಂಗಡಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾರ್ಗಸೂಚಿ ಉಲ್ಲಂಘಿಸಿ ಕ್ರಿಕೆಟ್ ಆಡುತ್ತಿದ್ದ ಒಬ್ಬರನ್ನು ಬಂಧಿಸಲಾಗಿದೆ. ಇತರರು ಪರಾರಿಯಾಗಿದ್ದಾರೆ. ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ’ ಎಂದು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾರೆ.

‘ಅನವಶ್ಯವಾಗಿ ಸಂಚರಿಸುತ್ತಿದ್ದ 35 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಮಾಸ್ಕ್‌ ಧರಿಸಿದೆ ಓಡಾಡುತ್ತಿದ್ದ 290 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ ಉಲ್ಲಂಘಿಸಿದ್ದ ವಿಷಯದಲ್ಲಿ ಮೂರು ಎಫ್‌ಐಆರ್‌ ದಾಖಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT