ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

Published : 14 ಸೆಪ್ಟೆಂಬರ್ 2024, 15:28 IST
Last Updated : 14 ಸೆಪ್ಟೆಂಬರ್ 2024, 15:28 IST
ಫಾಲೋ ಮಾಡಿ
Comments

ರಾಯಬಾಗ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ₹ 75 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ಎಂ. ಐಹೊಳೆ ಶನಿವಾರ ಭೂಮಿ ಪೂಜೆ ನೆರವೇರಿಸಿದರು.

ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ಹಾಗೂ ಶಿಸ್ತಿನ ಜೊತೆಗೆ ಉತ್ತಮ ಸಂಸ್ಕಾರವನ್ನೂ ನೀಡುವ ಜವಾಬ್ದಾರಿ ಇಂದಿನ ಶಿಕ್ಷಕರ ಮೇಲಿದೆ. ಶಾಲೆಯ ಅಭಿವೃದ್ಧಿ, ಮಕ್ಕಳ ಏಳಿಗೆಗಾಗಿ ದುಡಿಯುವ ಉದಾತ್ತ ಮನೋಭಾವ ಬೆಳೆಸಿಕೊಳ್ಳಬೇಕು. ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಕರ, ಸಮುದಾಯದ ಹಾಗೂ ಪಾಲಕರ ಪಾತ್ರ ಏನು ಎಂಬುದನ್ನು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರಿ ಕಾಲೇಜುಗಳನ್ನು ಮಾದರಿ ಕಾಲೇಜುಗಳನ್ನಾಗಿ ರೂಪಿಸುವ ಕೆಲಸ ಮಾಡಲು ಶಿಕ್ಷಕ ಸಮುದಾಯ ಮುಂದಾಗಬೇಕೆಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಅರುಣ ಕಾಂಬಳೆ, ಮುಖಂಡರಾದ ಸದಾಶಿವ ಘೋರ್ಪಡೆ, ಸದಾನಂದ ಹಳಿಂಗಳಿ, ದತ್ತಾ ಜಾಧವ, ಸಂಗಣ್ಣ ದತ್ತವಾಡೆ, ಮಹೇಶ ಕರಮಡಿ,ಸುರೇಶ ಮಾಳಿ, ಜಿಯಾಉಲ್ಲಾ ಮುಲ್ಲಾ, ಮುರುಗೇಶ ಮಾಳಿ,ಮಹೇಶ ಕುಲಗುಡೆ, ರಿತೇಶ ಅವಳೆ, ಪ್ರೇಮ್ ಸಾನೆ,ಭಾರತಿ ಲೋಹಾರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT