ನಿಪ್ಪಾಣಿ: ಒಂದು ದೇಶದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ತಂತ್ರಜ್ಞಾನ, ವಾಣಿಜ್ಯ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೆ.ಎಲ್.ಇ. ಸಂಸ್ಥೆಯ ಹುಬ್ಬಳ್ಳಿಯ ಪಿ.ಸಿ. ಜಾಬಿನ್ ವಿಜ್ಞಾನ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ವಿ.ಬಿ. ಹಿರೇಮಠ ಹೇಳಿದರು.

ಸ್ಥಳೀಯ ಕೆ.ಎಲ್.ಇ ಸಂಸ್ಥೆಯ ಜಿ.ಐ. ಬಾಗೇವಾಡಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆವರಣದಲ್ಲಿಯ ಆಶೀರ್ವಾದ ಸಾಂಸ್ಕೃತಿಕ ಭವನದಲ್ಲಿ ಶುಕ್ರವಾರ ಜರುಗಿದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಲದ ಹರಿವಿನಲ್ಲಿ ದೂರವಾದ ನೆನಪುಗಳು ಮತ್ತೆ ಒಂದೇ ವೇದಿಕೆಯಲ್ಲಿ ಬೆಸೆಯುವ ಕ್ಷಣಗಳು ಅಪರೂಪ. ಒಮ್ಮೆ ಕಲಿಕೆಯ ಕನಸುಗಳನ್ನು ಹೃದಯದಲ್ಲಿ ಹೊತ್ತುಕೊಂಡು ನಡೆದುಹೋದ ಹೆಜ್ಜೆಗಳು, ಕಾಲದ ಪ್ರವಾಹವನ್ನು ದಾಟಿ ಮತ್ತೆ ಅದೇ ಆವರಣದಲ್ಲಿ ಸಂಗಮಗೊಂಡ ದಿನವಿದು ಎಂದರು.

ಬಿಎಸ್ಎನ್ಎಲ್ ಕೊಲ್ಹಾಪುರದ ನಿವೃತ್ತ ಉಪ ಮಹಾ ವ್ಯವಸ್ಥಾಪಕ ಲಿಂಗರಾಜ ಎಂ. ಗೋಧಿ, ಸ್ಥಳೀಯ ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಮಹೇಶ ಬಾಗೇವಾಡಿ, ಸದಸ್ಯ ಎಸ್.ಆರ್. ಪಾಟೀಲ, ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯ ಎಂ.ಬಿ. ಕೋಥಳೆ ಮಾತನಾಡಿದರು.

ನಿವೃತ್ತ ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಕೆ.ಎಲ್.ಇ. ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ಪ್ರವೀಣ ಬಾಗೇವಾಡಿ, ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯ ರವೀಂದ್ರ ಶೆಟ್ಟಿ, ಎಂ.ಆರ್. ಪಾಟೀಲ, ಎಂ.ಎಂ. ಗಡಕರಿ, ಪ್ರೊ.ಶಿವಲಿಂಗ ನಾಯಕ, ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎಂ. ಹುರಳಿ, ಪ್ರಿಂಕಜ್ ಟಾಕಳೆ, ಗೀತಾ ಕಮತೆ, ನಮಿತಾ ನಾಯಿಕ, ಸೌಮ್ಯಾ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.