ಬೆಳಗಾವಿ: ‘ಜಿಲ್ಲೆಯಲ್ಲಿ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವು ಸಾಧಾರಣವಾಗಿದ್ದು, ಕಲಿಕಾ ಗುಣಮಟ್ಟ ಸುಧಾರಣೆಗೆ ಯೋಜನೆಗಳನ್ನು ರೂಪಿಸಬೇಕು. ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸದೇ ಪರ್ಯಾಯ ಕಟ್ಟಡದ ವ್ಯವಸ್ಥೆ ಮಾಡಿ, ಮಕ್ಕಳ ಹಾಜರಾತಿ ಬಗ್ಗೆಯೂ ಗಮನ ಗಮನಹರಿಸಬೇಕು’ ಎಂದು ವಾಣಿಜ್ಯ ತೆರಿಗೆ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಪುಲ್ ಬನ್ಸಲ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅನುದಾನಿತ ಶಾಲೆಗಳಲ್ಲಿಯೂ ಪರೀಕ್ಷಾ ಫಲಿತಾಂಶ ಕುಂಠಿತವಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಅನುದಾನಿತ ಶಾಲೆಗಳಲ್ಲಿ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದರು.

‘ನಾಗಮೋಹನದಾಸ ವರದಿಯಂತೆ ಈಗಾಗಲೇ ಪರಿಶಿಷ್ಟ ಜಾತಿಗಳ (ಒಳ ಮೀಸಲಾತಿ) ಸಮಗ್ರ ಗಣತಿ ಕಾರ್ಯ ಜಿಲ್ಲೆಯಲ್ಲಿ ಜರುಗತ್ತಿದೆ. ನ್ಯೂನತೆಗಳಿಗೆ ಆಸ್ಪದ ನೀಡದೇ ಈ ಗಣತಿ ಕಾರ್ಯವನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು’ ಎಂದು ಸೂಚನೆ ನೀಡಿದರು.

‘ಮಳೆ ಹಾನಿಯಿಂದ ಒಳಗಿರುವ ಮನೆಗಳ ಸಮೀಕ್ಷೆ ನಡೆಸಲಾಗಿದೆ. ಮಳೆ ಹಾನಿಯಾದ ವರದಿ ಬಂದಕೂಡಲೇ ತಕ್ಷಣ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಕಳೆದ ವರ್ಷಕ್ಕೆ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಳೆಯಿಂದ ಹಾನಿ ಪ್ರಮಾಣ ಹೆಚ್ಚಾಗಿಲ್ಲ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ, ಡಿಡಿಪಿಐ ಲೀಲಾವತಿ ಹಿರೇಮಠ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಮಾತನಾಡಿದರು. ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿನವ ಜೈನ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ, ಉಪವಿಭಾಗಾಧಿಕಾರಿ ಶ್ರವಣ್ ನಾಯಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ ಇತರರು ಇದ್ದರು.

ನಗರದಲ್ಲಿ 24X7 ಕುಡಿಯುವ ನೀರು ಪೂರೈಕೆ ಕಾಮಗಾರಿಯನ್ನು ಆಗಸ್ಟ್ ಅಂತ್ಯದವರೆಗೆ ಪೂರ್ಣಗೊಳಿಸಲಾಗುವುದು. ಮೇಲ್ಸೆತುವೆ ನಿರ್ಮಾಣಕ್ಕೂ ಆದ್ಯತೆ ನೀಡಲಾಗುವುದು
ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.