ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನ: ಸಚಿವ ಸತೀಶ ಜಾರಕಿಹೊಳಿ ಭರವಸೆ

Published 4 ಫೆಬ್ರುವರಿ 2024, 16:17 IST
Last Updated 4 ಫೆಬ್ರುವರಿ 2024, 16:17 IST
ಅಕ್ಷರ ಗಾತ್ರ

ಬೆಳಗಾವಿ: ‘ಸೇವಾಬಡ್ತಿ, ವರ್ಗಾವಣೆ, ಹೊಸ ಶಿಕ್ಷಕರ ನಿಯೋಜನೆಗೆ ಸಂಬಂಧಿಸಿ ಶಿಕ್ಷಣ ಸಚಿವರು ಮತ್ತು ಶಾಲಾ ಶಿಕ್ಷಣ ಇಲಾಖೆಯೊಂದಿಗೆ  ಚರ್ಚಿಸಿ, ಸರ್ಕಾರಿ ಪ್ರಾಥಮಿಕ ಪದವೀಧರ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಯತ್ನಿಸುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು.

ಇಲ್ಲಿನ ಹಿಂದವಾಡಿಯ ಮಹಾವೀರ ಭವನದಲ್ಲಿ ಕರ್ನಾಟಕದ ಪದವೀಧರ ಶಿಕ್ಷಕರ ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ‌ ಮಹಾಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಸರ್ಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಅಭಿವೃದ್ಧಿ ಹೊಂದಬೇಕು. ಅಲ್ಲಿ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವಂತೆ ಗುಣಾತ್ಮಕ ಶಿಕ್ಷಣ ನೀಡಬೇಕು ಎಂದು ಕನಸು ಕಂಡವನು ನಾನು. ಲೋಕೋಪಯೋಗಿ ಇಲಾಖೆ ಮೂಲಕ ಹಲವು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಂದಿನ ದಿನಗಳಲ್ಲೂ ಈ ಕೆಲಸ ಮುಂದುವರಿಯಲಿದೆ’ ಎಂದರು.

ವಿಧಾನ ಪರಿಷತ್‌ ಸದಸ್ಯ ಪ್ರಕಾಶ ಹುಕ್ಕೇರಿ, ‘ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು. ಶಾಸಕರಾದ ‌ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಮಾತನಾಡಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯ ಎಸ್.ಡಿ.ಗಾಂಜಿ ಉದ್ಘಾಟಿಸಿದರು. ಸಂಘದ ರಾಜ್ಯ ಘಟಕದ ಅಧ್ಯಕ್ಷ ಪಿ.ಮುರಳೀಧರ ಶಿಕ್ಷಕರ ಸಮಸ್ಯೆಗಳ ಕುರಿತು ವಿವರಿಸಿದರು. ಇದೇವೇಳೆ ಸಂಘದ ಲೋಗೋ ಅನಾವರಣಗೊಳಿಸಲಾಯಿತು.


ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎಂ.ಎಂ.ಸಿಂಧೂರ, ಉಮಾದೇವಿ ಹಿರೇಮಠ, ಯಲ್ಲಪ್ಪಗೌಡ, ನರಸಿಂಹಮೂರ್ತಿ, ಕೆ.ಎನ್.ಶಂಕರ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ನಾಗಲಾಪುರ, ವಿಠ್ಠಲ ವಾಗೇರಿ, ಗೋವಿಂದ ಸಣ್ಣಕ್ಕಿ, ಸುಕುಮಾರ ಬಾಳಿಕಾಯಿ, ಉಮೇಶ್ವರ ಮರಗಾಲ, ರಾಜೇಶ್ವರಿ ಖನಗಣ್ಣಿ, ದೀಪಿಕಾ ಸುಳೇಬಾವಿ, ಶೃತಿ ಸುಪ್ಪನ್ನವರ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT