ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಶೇ 67.44, ಚಿಕ್ಕೋಡಿ ಶೇ 75.52 ಮತದಾನ

Last Updated 24 ಏಪ್ರಿಲ್ 2019, 13:39 IST
ಅಕ್ಷರ ಗಾತ್ರ

ಬೆಳಗಾವಿ: ಮಂಗಳವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಆಗಿರುವ ಮತದಾನದ ಪ್ರಮಾಣದ ಅಂಕಿ–ಅಂಶವನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.

ಈ ಪ್ರಕಾರ, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಶೇ 17,71,829 ಮತದಾರರ ಪೈಕಿ1,194,909 ಮಂದಿ ಮತ ಚಲಾಯಿಸಿದ್ದಾರೆ. ಅಂದರೆ ಶೇ 67.44ರಷ್ಟು ಮತದಾನವಾಗಿದೆ. 6,23,003 ಪುರುಷರು ಹಾಗೂ 5,71,898 ಮಹಿಳೆಯರು ಹಾಗೂ 8 ಮಂದಿ ಇತರರು ಮತ ದಾನ ಮಾಡಿದ್ದಾರೆ.

ಚಿಕ್ಕೋಡಿ ಲೋಕಸಭಾ ಕ್ಷೇತ್ರದ 16,04,483 ಮತದಾರರ ಪೈಕಿ 12,11,717 ಮಂದಿ ಹಕ್ಕು ಚಲಾಯಿಸಿದ್ದು, ಶೇ 75.52ರಷ್ಟು ಮತದಾನವಾಗಿದೆ. 6,32,070 ಪುರುಷರು, 5,79,640 ಮಹಿಳೆಯರು ಮತ್ತು 7 ಮಂದಿ ಇತರರು ಮತ ಹಾಕಿದ್ದಾರೆ.

ಎರಡೂ ಕ್ಷೇತ್ರಗಳಲ್ಲೂ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT