ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ‘ಕುತಂತ್ರ ಮಾಡುವುದು ನನಗೆ ಗೊತ್ತಿಲ್ಲ’

Last Updated 26 ಮಾರ್ಚ್ 2023, 8:49 IST
ಅಕ್ಷರ ಗಾತ್ರ

ಬೆಳಗಾವಿ: ‘ಚುನಾವಣೆಯಲ್ಲಿ ಗೆಲ್ಲುವುದಕ್ಕಾಗಿ ಯಾವುದೇ ರೀತಿಯ ತಂತ್ರ, ಕುತಂತ್ರ ಮಾಡುವುದು ನನಗೆ ಗೊತ್ತಿಲ್ಲ. ಕೇವಲ ನಾನು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಜನರ ಆಶೀರ್ವಾದ, ಬೆಂಬಲ ಕೇಳುತ್ತೇನೆ’ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಪ್ಲಾಟ್ ಹಾಗೂ ಸಂತಿಬಸ್ತವಾಡ ಗ್ರಾಮದಿಂದ ತೀರ್ಥಕುಂಡೆ ಗ್ರಾಮದವರೆಗಿನ ರಸ್ತೆಯ ಅಭಿವೃದ್ಧಿಗಾಗಿ ₹ 65 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

‘ಕಳೆದ ಚುನಾವಣೆಯಲ್ಲಿ ಜನರು ನನ್ನನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಿದ ನಂತರ ನಾನು ಕೇವಲ ಕ್ಷೇತ್ರದ ಅಭಿವೃದ್ಧಿಗೆ ಲಕ್ಷ್ಯ ಕೊಟ್ಟಿದ್ದೇನೆ. ಯಾವುದೇ ರೀತಿಯ ರಾಜಕೀಯ ಮಾಡಿಲ್ಲ. ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗಿಲ್ಲ. ನನ್ನ ಕರ್ತವ್ಯಕ್ಕೆ ಬದ್ಧಳಾಗಿ ಕಾರ್ಯನಿರ್ವಹಿಸಿದ್ದೇನೆ. ಇದೆಲ್ಲ ಜನರ ಮುಂದಿದೆ. ಮತ್ತೊಮ್ಮೆ ನನಗೆ ಆಶೀರ್ವದಿಸಿ ಎಂದು ಕೇಳಲು ನನ್ನ ಕೆಲಸವೇ ಜನರ ಮುಂದಿದೆ’ ಎಂದು ಅವರು ತಿಳಿಸಿದರು.

ಗ್ರಾಮದ ಹಿರಿಯರಾದ ಆಷ್ಪಾಕ್ ತಹಶೀಲ್ದಾರ, ದೇಮಣ್ಣ ನಾಯ್ಕ, ಬಸು ಬಿರಮುತಿ, ರಾಮನಿಂಗ ಕರ್ಲೇಕರ್, ಅಜಯ ಚನ್ನಿಕುಪ್ಪಿ, ರೇಣುಕಾ ಖಾನಾಪೂರಿ, ಸಕ್ಕುಬಾಯಿ ಪಾಟೀಲ ಮುಂತಾದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT