ಮಂಗಳವಾರ, ಏಪ್ರಿಲ್ 13, 2021
32 °C

ಮತ ಎಣಿಕೆ ಕೇಂದ್ರಕ್ಕೆ ಚುನಾವಣಾ ವೀಕ್ಷಕ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಗರದ ಆರ್.ಪಿ.ಡಿ. ಕಾಲೇಜಿನಲ್ಲಿ ಸ್ಟ್ರಾಂಗ್ ರೂಂ ನಿರ್ಮಾಣ ಹಾಗೂ ಮತ  ಎಣಿಕೆ ಕೇಂದ್ರಗಳ ಸಿದ್ಧತೆಗಳನ್ನು ಚುನಾವಣಾ ಸಾಮಾನ್ಯ ವೀಕ್ಷಕ ಡಾ.ಚಂದ್ರಭೂಷಣ್ ತ್ರಿಪಾಠಿ ಅವರು ಬುಧವಾರ ಪರಿಶೀಲಿಸಿದರು.

ಗುರುತಿಸಲಾಗಿರುವ ಪ್ರತಿಯೊಂದು ಕೊಠಡಿಗಳನ್ನು ಪರಿಶೀಲಿಸಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿಯ ಪ್ರಕಾರ ನಿರ್ಮಿಸಿರುವುದನ್ನು ಖಚಿತಪಡಿಸಿಕೊಂಡರು. ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ‘ಮಾರ್ಗಸೂಚಿ ಪ್ರಕಾರ ನಿಗದಿತ ಅವಧಿಯೊಳಗೆ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು’ ಎಂದು ತಿಳಿಸಿದರು.

‘ಈ ಬಾರಿ ಮತ ಎಣಿಕೆ ವೇಳೆ ಕೋವಿಡ್-19 ಮಾರ್ಗಸೂಚಿಗಳನ್ನು ಕೂಡ ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಭದ್ರತಾ ವ್ಯವಸ್ಥೆ, ಬ್ಯಾರಿಕೇಡಿಂಗ್, ಚುನಾವಣಾ ವೀಕ್ಷಕರ ವಿಶೇಷ ಕೊಠಡಿಗಳು, ಮಾಧ್ಯಮ ಕೇಂದ್ರ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ’ ಎಂದರು.

ನಗರ ಪೊಲೀಸ್ ಆಯುಕ್ತ ಡಾ.ಕೆ. ತ್ಯಾಗರಾಜನ್, ಡಿಸಿಪಿ ಯಶೋದಾ ವಂಟಗೋಡಿ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು