ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮನೆ ಮೇಲೆ ಚುನಾವಣಾಧಿಕಾರಿಗಳ ದಾಳಿ

Published 20 ಮಾರ್ಚ್ 2024, 8:21 IST
Last Updated 20 ಮಾರ್ಚ್ 2024, 8:21 IST
ಅಕ್ಷರ ಗಾತ್ರ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಮ್ಮ ಗೃಹಕಚೇರಿಯಲ್ಲಿ ಮಂಗಳವಾರ ನಡೆಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯ ಹಾಗೂ ಆಶಾ ಕಾರ್ಯಕರ್ತೆಯರ ಸಭೆಯನ್ನು ಚುನಾವಣಾಧಿಕಾರಿಗಳು ಅರ್ಧಕ್ಕೆ ಮೊಟಕುಗೊಳಿಸಿದರು. ಸಚಿವೆ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸುವುದಾಗಿಯೂ ಚುನಾವಣಾಧಿಕಾರಿಗಳು ತಿಳಿಸಿದರು.

ಇಲ್ಲಿನ ಕುವೆಂಪು ನಗರದಲ್ಲಿರುವ ಲಕ್ಷ್ಮಿ ಅವರ ವಾಸದ ಮನೆಯ ಪಕ್ಕದಲ್ಲಿ ವಿಶಾಲವಾದ ಗೃಹಕಚೇರಿ ಇದೆ. ಮಂಗಳವಾರ ಬೆಳಿಗ್ಗೆಯೇ ಅಲ್ಲಿ 500ಕ್ಕೂ ಹೆಚ್ಚು ಅಂಗನವಾಡಿ– ಆಶಾ ಕಾರ್ಯಕರ್ತೆಯರು ಸೇರಿದ್ದರು. ಇದನ್ನು ಕಂಡು ಅಪರಿಚಿತರೊಬ್ಬರು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದರು.

ಜಿಲ್ಲಾ ಚುನಾವಣಾಧಿಕಾರಿ ನಿತೇಶ್‌ ಪಾಟೀಲ ನೇತೃತ್ವದಲ್ಲಿ ಚುನಾವಣಾಧಿಕಾರಿಗಳು ಹಾಗೂ ಫ್ಲೈಯಿಂಗ್‌ ಸ್ಕ್ವಾಡ್‌ ಸಿಬ್ಬಂದಿ ದಾಳಿ ಮಾಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕಾರ್ಯಕರ್ತೆಯರನ್ನು ಹೊರಗೆ ಕಳುಹಿಸಿದರು. ಹಲವರಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಸಚಿವೆ ಲಕ್ಷ್ಮಿ ಅವರಿಂದಲೂ ವಿವರ ಪಡೆದರು.

‘ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಮೃಣಾಲ್‌ ಹೆಬ್ಬಾಳಕರ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಆಶಾ ಕಾರ್ಯಕರ್ತೆಯರನ್ನು ತಮ್ಮ ಮನೆಗೆ ಕರೆಯಿಸಿ ಸಭೆ ನಡೆಸಿದ್ದಾರೆ. ಚುನಾವಣೆಯಲ್ಲಿ ತಮ್ಮ ಮಗನ ಪರವಾಗಿ ಮತಗಳನ್ನು ಹಾಕಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗ ಎಂದು ದೂರು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ’ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT