ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ‘ಮತದಾನದ ಹಬ್ಬ’ಕ್ಕೆ ಕ್ಷಣಗಣನೆ

ಸುಗಮ ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
Published 6 ಮೇ 2024, 13:36 IST
Last Updated 6 ಮೇ 2024, 13:36 IST
ಅಕ್ಷರ ಗಾತ್ರ

ಬೆಳಗಾವಿ: ಲೋಕ ‘ಕದನ’ದ ಮತದಾನಕ್ಕೆ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ (ಮೇ 7ರಂದು) ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ನಡೆಯಲಿರುವ ಮತದಾನ ಪ್ರಕ್ರಿಯೆಯನ್ನು ಸುಗಮವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇಲ್ಲಿನ ಸಿಪಿಇಡಿ ಮೈದಾನದ ವನಿತಾ ವಿದ್ಯಾಲಯದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಾಗೂ ಬಿ.ಕೆ.ಪ್ರೌಢಶಾಲೆ ಮೈದಾನದಲ್ಲಿ ಬೆಳಗಾವಿ ಉತ್ತರ, ದಕ್ಷಿಣ ಕ್ಷೇತ್ರಗಳ ಮಸ್ಟರಿಂಗ್‌ ಪ್ರಕ್ರಿಯೆ ಸೋಮವಾರ ನಡೆಯಿತು. ವಿವಿಧೆಡೆಯಿಂದ ಬಂದಿದ್ದ ಸಿಬ್ಬಂದಿಗೆ ಕೆಲಸ ಹಂಚಿಕೆ ಮಾಡಲಾಯಿತು.

ಸುಡು ಬಿಸಿಲಲ್ಲೂ ಉತ್ಸಾಹದಿಂದ ಬಂದಿದ್ದ ಚುನಾವಣೆ ಸಿಬ್ಬಂದಿ ವಿದ್ಯುನ್ಮಾನ ಮತಯಂತ್ರ ಹಾಗೂ ಇತರೆ ಪರಿಕರಗಳೊಂದಿಗೆ ಮತಗಟ್ಟೆಗಳತ್ತ ಮುಖಮಾಡಿದರು. ಸಿಬ್ಬಂದಿ, ಮತಯಂತ್ರಗಳನ್ನು ಸುರಕ್ಷಿತವಾಗಿ ಮತಗಟ್ಟೆಗೆ ತಲುಪಿಸುವುದಕ್ಕಾಗಿ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು.

ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ 13, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ 18 ಮಂದಿ ಕಣದಲ್ಲಿ ಉಳಿದಿದ್ದು, ಜಿಲ್ಲೆಯಲ್ಲಿ 4,524 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ ಬೆಳಗಾವಿಯಲ್ಲಿ 2,086, ಚಿಕ್ಕೋಡಿಯಲ್ಲಿ 1,896, ಉತ್ತರ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಒಳಪಟ್ಟ ಖಾನಾಪುರ ಮತ್ತು ಚನ್ನಮ್ಮನ ಕಿತ್ತೂರು ವಿಧಾನಸಭೆ ಕ್ಷೇತ್ರಗಳಲ್ಲಿ 542 ಮತಗಟ್ಟೆ ಇವೆ.

ಬೆಳಗಾವಿಯಲ್ಲಿನ ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ ಐದು ದೇಶಗಳ 10 ಪ್ರತಿನಿಧಿಗಳು ಆಗಮಿಸಿರುವುದು ಖುಷಿ ತಂದಿದೆ. ಮಂಗಳವಾರ ಹಲವು ಮತಗಟ್ಟೆಗೆ ತೆರಳಿ ಮತದಾನ ಪ್ರಕ್ರಿಯೆಯನ್ನೆಲ್ಲ ವೀಕ್ಷಿಸಲಿದ್ದಾರೆ.
ನಿತೇಶ್‌ ಪಾಟೀಲ, ಜಿಲ್ಲಾ ಚುನಾವಣಾಧಿಕಾರಿ

ಜಿಲ್ಲೆಯಲ್ಲಿ 20,55,870 ಪುರುಷರು, 20,49,169 ಮಹಿಳೆಯರು, 186 ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ 41,05,225 ಮಂದಿ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. 1,24,419 ಯುವಕ–ಯುವತಿಯರು ಇದೇ ಮೊದಲ ಸಲ ಮತ ಚಲಾಯಿಸುತ್ತಿರುವುದು ವಿಶೇಷ.

ಫಲ ಕೊಡುವುದೇ ಜಾಗೃತಿ: 2019ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಶೇ 67.44, ಚಿಕ್ಕೋಡಿ ಕ್ಷೇತ್ರದಲ್ಲಿ ಶೇ75.22ರಷ್ಟು ಮತದಾನವಾಗಿತ್ತು. ಈ ಬಾರಿ ಮತದಾನ ಹೆಚ್ಚಳಕ್ಕಾಗಿ ಜಿಲ್ಲಾ ಸ್ವೀಪ್‌ ಸಮಿತಿ ಸಾಕಷ್ಟು ಜಾಗೃತಿ ಕಾರ್ಯಕ್ರಮ ಕೈಗೊಂಡಿದೆ.

ಆದರೆ, ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಗಡಿ ದಾಟಿದೆ. ಬಿಸಿಲಿನ ಅಬ್ಬರದಿಂದಾಗಿ ಮತದಾನ ಪ್ರಮಾಣ ತಗ್ಗುವ ಸಾಧ್ಯತೆ ಇದೆ. ಹಾಗಾಗಿ ಮತಗಟ್ಟೆಗೆ ಬರುವವರಿಗೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸೂರ್ಯ ಅಬ್ಬರಿಸುವ ಮುನ್ನವೇ, ಮತಗಟ್ಟೆಯತ್ತ ಹೆಜ್ಜೆಹಾಕಬೇಕೆಂದು ಅಧಿಕಾರಿಗಳು ಮತ್ತು ವಿವಿಧ ರಾಜಕೀಯ ಪಕ್ಷದವರು ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸೋಮವಾರ ಚುನಾವಣೆ ಸಿಬ್ಬಂದಿ ಮತಯಂತ್ರಗಳನ್ನು ಹೊತ್ತು ಮತಗಟ್ಟೆಗಳತ್ತ ಸಾಗಿದರು–ಪ್ರಜಾವಾಣಿ ಚಿತ್ರ:ಏಕನಾಥ ಅಗಸಿಮನಿ
ಬೆಳಗಾವಿಯಲ್ಲಿ ಸೋಮವಾರ ಚುನಾವಣೆ ಸಿಬ್ಬಂದಿ ಮತಯಂತ್ರಗಳನ್ನು ಹೊತ್ತು ಮತಗಟ್ಟೆಗಳತ್ತ ಸಾಗಿದರು–ಪ್ರಜಾವಾಣಿ ಚಿತ್ರ:ಏಕನಾಥ ಅಗಸಿಮನಿ
ಬೆಳಗಾವಿಯಲ್ಲಿ ಸೋಮವಾರ ಚುನಾವಣೆ ಸಿಬ್ಬಂದಿ ಮತಯಂತ್ರಗಳನ್ನು ಹೊತ್ತು ಮತಗಟ್ಟೆಗಳತ್ತ ಸಾಗಿದರು–ಪ್ರಜಾವಾಣಿ ಚಿತ್ರ:ಏಕನಾಥ ಅಗಸಿಮನಿ
ಬೆಳಗಾವಿಯಲ್ಲಿ ಸೋಮವಾರ ಚುನಾವಣೆ ಸಿಬ್ಬಂದಿ ಮತಯಂತ್ರಗಳನ್ನು ಹೊತ್ತು ಮತಗಟ್ಟೆಗಳತ್ತ ಸಾಗಿದರು–ಪ್ರಜಾವಾಣಿ ಚಿತ್ರ:ಏಕನಾಥ ಅಗಸಿಮನಿ
ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಮಸ್ಟರಿಂಗ್‌ ಪ್ರಕ್ರಿಯೆ ನಡೆಯಿತು–ಪ್ರಜಾವಾಣಿ ಚಿತ್ರ
ಲೋಕಸಭೆ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಸೋಮವಾರ ಮಸ್ಟರಿಂಗ್‌ ಪ್ರಕ್ರಿಯೆ ನಡೆಯಿತು–ಪ್ರಜಾವಾಣಿ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT