ಖಾನಾಪುರ (ಬೆಳಗಾವಿ ಜಿಲ್ಲೆ): ಕೃಷಿಭೂಮಿಯಲ್ಲಿ ತುಂಡರಿಸಿ ಬಿದ್ದಿದ್ದ ತಂತಿಯಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶಿಸಿ ಎರಡು ಕಾಡಾನೆಗಳು ಸಾವನ್ನಪ್ಪಿದ ಘಟನೆ ತಾಲ್ಲೂಕಿನ ನಾಗರಗಾಳಿ ಅರಣ್ಯ ವ್ಯಾಪ್ತಿಯ ಸುಳ್ಳೇಗಾಳಿ ಬಳಿ ಭಾನುವಾರ ಸಂಭವಿಸಿದೆ.

ಹಲವು ದಿನಗಳ ಹಿಂದೆ ನೆರೆಯ ದಾಂಡೇಲಿ ಕಾಡಿನಿಂದ ಆಹಾರ ಅರಸಿ ತಾಲ್ಲೂಕಿಗೆ ಬಂದಿದ್ದ 20ರಿಂದ 22 ವರ್ಷ ವಯಸ್ಸಿನ ಮತ್ತು 40 ರಿಂದ 45 ವರ್ಷ ವಯಸ್ಸಿನ ಗಂಡಾನೆಗಳು ಅಸುನೀಗಿವೆ.

ಆನೆಗಳ ಕಳೇಬರ ಪತ್ತೆಯಾದ ಜಮೀನಿನ ಮಾಲೀಕರಾದ ಸುಳ್ಳೇಗಾಳಿಯ ಗಣಪತಿ ಗುರವ ಅವರು, ನಾಗರಗಾಳಿ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಹೆಸ್ಕಾಂ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

‘ಮರಣೋತ್ತರ ಪರೀಕ್ಷೆ ನಂತರ ಇಲಾಖೆ ನಿಯಮದಂತೆ ಆನೆಗಳ ಅಂತ್ಯಕ್ರಿಯೆ ಮಾಡಲಾಗುತ್ತದೆ. ಬೆಳೆ ಸಂರಕ್ಷಣೆ ನೆಪದಲ್ಲಿ ಎರಡು ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಲಿದೆ’ ಎಂದು ನಾಗರಗಾಳಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ಮಗದುಮ್ ಹೇಳಿದರು.

‘ನಿರ್ಲಕ್ಷ್ಯ ವಹಿಸಿದವರ ವಿರುದ್ಧ ಕ್ರಮವಾಗಲಿ’

ವಿದ್ಯುತ್ ಸ್ಪರ್ಶದಿಂದ ಆನೆಗಳ ಅಸ್ವಾಭಾವಿಕ ಸಾವಿನ ಪ್ರಕರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಥಳೀಯರ ಜತೆ ಸಭೆ ನಡೆಸಿ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಲಿಖಿತ ಸೂಚನೆ ನೀಡಿದ ನಂತರವೂ ಇಂಥ ಘಟನೆ ನಡೆದಿರುವುದು ದುರದೃಷ್ಟಕರ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಆಗಬೇಕು.–ಗಿರಿಧರ ಕುಲಕರ್ಣಿ ವನ್ಯಜೀವಿ ಸಂರಕ್ಷಣಾವಾದಿ