ಮಂಗಳವಾರ, ಅಕ್ಟೋಬರ್ 26, 2021
20 °C

ಭೀಮಪ್ಪ ಪುತ್ರಗೆ ನೌಕರಿ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ತಾಲ್ಲೂಕಿನ ಬಡಾಲ ಅಂಕಲಗಿಯಲ್ಲಿ ಗೋಡೆ ಬಿದ್ದಿದ್ದರಿಂದ ಕುಟುಂಬದ ಆರು ಮಂದಿಯನ್ನು ಕಳೆದುಕೊಂಡಿರುವ ಭೀಮಪ್ಪ ಖನಗಾಂವಿ ಅವರ ಕೋರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸರ್ಕಾರಾತ್ಮಕವಾಗಿ ಸ್ಪಂದಿಸಿದರು.

‘ನನ್ನ ಮಗ ದೇವರಾಜ್‌ ಪಿಯುಸಿ ಓದಿದ್ದಾನೆ. ಅವನಿಗೆ ಉದ್ಯೋಗ ದೊರಕಿಸಿಕೊಟ್ಟರೆ ಅನುಕೂಲವಾಗುತ್ತದೆ’ ಎಂದು ಮನವಿ ಮಾಡಿದರು.

‘ಆ ಯುವಕನ ವಿದ್ಯಾರ್ಹತೆ ಪರಿಶೀಲಿಸಿ, ಸರ್ಕಾರಿ ಹಾಸ್ಟೆಲ್‌ನಲ್ಲಿ ಕೆಲಸ ನೀಡುವ ಬಗ್ಗೆ ಪರಿಶೀಲಿಸಬೇಕು’ ಎಂದು ಸಚಿವರು ಜಿ.ಪಂ. ಸಿಇಒ ಎಚ್‌.ವಿ. ದರ್ಶನ್‌ ಅವರಿಗೆ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.