ಖಾನಾಪುರ: ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರದುಂಡೇಶ್ವರ ಮಹಾದೇವ ಬನ್ನೂರ ಮಂಗಳವಾರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮನರೇಗಾ ಕಾಮಗಾರಿಗೆ ತಾಂತ್ರಿಕ ಅನುಮೋದನೆ ನೀಡಲು ತಮ್ಮ ಕಚೇರಿಯಲ್ಲೇ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರಿಂದ ₹10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಖಾನಾಪುರ ತಾಲ್ಲೂಕಿನ ನೀಲಾವಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ವಾರ್ಡಿನಲ್ಲಿ ನರೇಗಾ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಾಂತ್ರಿಕ ಅನುಮೋದನೆ ನೀಡುವಂತೆ ಕೋರಿ ಗ್ರಾಮ ಪಂಚಾಯ್ತಿಯಿಂದ ಆನ್-ಲೈನ್ ಮೂಲಕ ಪ್ರಸ್ತಾವ ಸಲ್ಲಿಸಲಾಗಿತ್ತು.

ಬನ್ನೂರ ಅವರು ನೀಲಾವಡೆ ಗ್ರಾಮ ಪಂಚಾಯ್ತಿ ಸದಸ್ಯ ವಿನಾಯಕ ಮುತಗೇಕರ ಅವರ ಬಳಿ ₹10 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವಿನಾಯಕ ಅವರು ವಿಷಯವನ್ನು ಬೆಳಗಾವಿಯ ಲೋಕಾಯುಕ್ತ ಪೊಲೀಸರ ಗಮನಕ್ಕೆ ತಂದಿದ್ದರು.

ಆರೋಪಿಯನ್ನು ಲಂಚದ ಹಣದ ಸಮೇತ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಲೋಕಾಯುಕ್ತ ಎಸ್.ಪಿ. ಹಣುಮಂತರಾಯ ಮಾರ್ಗದರ್ಶನದಲ್ಲಿ ಡಿಎಸ್ಪಿ ಭರತ ರೆಡ್ಡಿ, ಇನ್‌ಸ್ಪೆಕ್ಟರ್‌ಗಳಾದ ಉಸ್ಮಾನ ಅವಟಿ, ರವಿಕುಮಾರ ಧರ್ಮಟ್ಟಿ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.