ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರ್‌ಗೆ ಇತರ ಕ್ಷೇತ್ರಗಳ ಜ್ಞಾನ ಅಗತ್ಯ

ಮಾನವ ಸಂಪನ್ಮೂಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಗಿರೀಶ ಹೊಸೂರ ಅಭಿಮತ
Last Updated 15 ಸೆಪ್ಟೆಂಬರ್ 2019, 15:17 IST
ಅಕ್ಷರ ಗಾತ್ರ

ಬೆಳಗಾವಿ: ‘ದೇಶದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಪ್ರಮುಖವಾಗಿದ್ದು, ಎಂಜಿನಿಯರ್‌ಗಳು ಇತರ ಕ್ಷೇತ್ರಗಳ ಬಗ್ಗೆಯೂ ತಿಳಿದುಕೊಳ್ಳುವುದು ಅತ್ಯಗತ್ಯವಾಗಿದೆ’ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಗಿರೀಶ ಹೊಸೂರಅಭಿಪ್ರಾಯಪಟ್ಟರು.

ಇಲ್ಲಿನ ನೆಹರೂ ನಗರದ ಇನ್‌ಸ್ಟಿಟ್ಯೂಷನ್ ಆಫ್‌ ಎಂಜಿನಿಯರ್ಸ್‌ ಸಭಾಂಗಣದಲ್ಲಿ ಭಾನುವಾರ ನಡೆದ ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಹಾಗೂ ಎಂಜಿನಿಯರ್ಸ್ ದಿನಾಚರಣೆಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

‘ಎಂಜಿನಿಯರ್‌ಗಳು ಯಾವುದೇಕಾಮಗಾರಿಗಳನ್ನು ಕೈಗೊಳ್ಳಲುತಾಂತ್ರಿಕ ಪರಿಣಿತಿ ಹೊಂದಿದರೇ ಮಾತ್ರ ಸಾಲದು.ಕಾನೂನು, ನಿರ್ವಹಣೆ, ಆಡಳಿತ ಸೇರಿ ಇನ್ನಿತರ ವಿಷಯಗಳ ಬಗ್ಗೆಯೂ ಅರಿವು ಹೊಂದಿರಬೇಕು. ಅಂದಾಗ ಮಾತ್ರ ಒಂದು ಯೋಜನೆಯನ್ನು ಪರಿಪೂರ್ಣವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿ:‘ವೈದ್ಯಕೀಯ ಶಿಕ್ಷಣ ಹೊರತುಪಡಿಸಿ ಇನ್ನುಳಿದ ಯಾವುದೇ ಕ್ಷೇತ್ರದ ವಿಷಯಗಳನ್ನುಆಯ್ಕೆ ಮಾಡಿಕೊಂಡುವಿದ್ಯಾರ್ಥಿಗಳು ಅಭ್ಯಸಿಸುವ ನಿಟ್ಟಿನಲ್ಲಿಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗುತ್ತಿದೆ.ಈಗಾಗಲೇ ಕರಡು ಪ್ರತಿಯನ್ನು ಸಿದ್ಧಪಡಿಸಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತಿದೆ. ಮುಂಬರುವ ಲೋಕಸಭೆಯ ಚಳಿಗಾಲದ ಅಧಿವೇಶನದಲ್ಲಿ ನೂತನ ಶಿಕ್ಷಣ ನೀತಿಯನ್ನು ಮಂಡಿಸುವ ಸಾಧ್ಯತೆ ಇದೆ’ ಎಂದು ತಿಳಿಸಿದರು.

ಉದ್ಯಮಿಸಂಗಮೇಶ ನಿರಾಣಿ ಮಾತನಾಡಿ, ‘ವ್ಯರ್ಥವಾಗಿ ಸಮುದ್ರ ಸೇರುವ ನೀರನ್ನುನದಿಗಳ ಜೋಡಣೆಯಿಂದ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಿದೆ. ರಾಜ್ಯದಲ್ಲಿಯೂ ನದಿಗಳ ಜೋಡಣೆ ಮಾಡುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದಿಟ್ಟ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.

ತಂತ್ರಜ್ಞಾನದ ಪ್ರಯೋಜನ ಪಡೆಯಿರಿ: ‘ರೈತರು ಕೃಷಿ ಕಾರ್ಯಗಳಿಗೆ ನೀರನ್ನು ಬಳಸಿಕೊಳ್ಳಲು ತಂತ್ರಜ್ಞಾನದ ಪ್ರಯೋಜನ ಪಡೆಯಬೇಕು. ಮಳೆ ನೀರಿನ ಮರುಬಳಕೆಗಾಗಿ ಎಂಜಿನಿಯರ್‌ಗಳು ಸಂಶೋಧನೆ ಕೈಗೊಳ್ಳಬೇಕು. ಮಳೆ ನೀರು ಕೊಯ್ಲು ಘಟಕಗಳ ಬಗ್ಗೆ ಸಾರ್ವಜನಿಕರು ಆಸಕ್ತಿ ತಳೆಯಬೇಕು. ನೀರಿನ ಮಿತ ಬಳಕೆಗೆ ಎಲ್ಲರೂ ಆದ್ಯತೆ ನೀಡಬೇಕು’ ಎಂದರು.
ಪುಣೆಯ ವಿಜ್ಞಾನಿ ಸೆಲ್ವ ಬಾಲನ್ ಉಪನ್ಯಾಸ ನೀಡಿ, ‘ತಾಂತ್ರಿಕ ಕ್ಷೇತ್ರದಲ್ಲಿ ಇಂದು ಮಹತ್ತರ ಬದಲಾವಣೆಗಳಾಗುತ್ತಿವೆ.ಎಂಜಿನಿಯರ್‌ಗಳುನೂತನತಂತ್ರಜ್ಞಾನಕ್ಕೆ ಒಗ್ಗಿಕೊಂಡು ಕೆಲಸ ಮಾಡುವ ಸವಾಲು ಎದುರಾಗಿದೆ’ ಎಂದು ಅಭಿಪ್ರಾಯಪಟ್ಟರು.

ಧಾರವಾಡದ ಡಾ.ರಾಜೇಂದ್ರ ಪೋದ್ದಾರ ಹಾಗೂ ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಉಪನ್ಯಾಸ ನೀಡಿದರು. ಇನ್‌ಸ್ಟಿಟ್ಯೂಷನ್ ಆಫ್‌ ಎಂಜಿನಿಯರ್ಸ್‌ ಸ್ಥಳೀಯ ಘಟಕದ ಅಧ್ಯಕ್ಷ ಡಾ.ಸಿದ್ರಾಮಪ್ಪ ಇಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗೌರವ ಕಾರ್ಯದರ್ಶಿ ಬಿ.ಜಿ. ಧರೆನ್ನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT