ಭಾನುವಾರ, ಮಾರ್ಚ್ 26, 2023
24 °C

ಎಂಜಿನಿಯರಿಂಗ್ ಪಠ್ಯಪುಸ್ತಕ ಕನ್ನಡದಲ್ಲಿ ಸಿಗಲಿ: ವಕೀಲ ರಾಜು ಬಾಗೇವಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಇಲ್ಲಿನ ನೆಹರೂ ನಗರದ ಕನ್ನಡ ಭವನದಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ಸರಳವಾಗಿ ಸೋಮವಾರ ಆಚರಿಸಲಾಯಿತು.

ವಕೀಲ ರಾಜು ಬಾಗೇವಾಡಿ ಕನ್ನಡ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ನಿವೃತ್ತ ಶಿಕ್ಷಕ ಸಿ.ಎಂ.ಬೂದಿಹಾಳ, ‘ಕನ್ನಡವನ್ನು ಬಳಸುವುದರ ಮೂಲಕ, ಉಳಿಸಿ ಬೆಳೆಸಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷೆ ಮಂಗಲಾ ಮಟಗುಡ್ಡ, ‘ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣದ ಪಠ್ಯಪುಸ್ತಕಗಳನ್ನು ಕನ್ನಡದಲ್ಲಿ ಬರೆದು, ಕನ್ನಡ ನಾಡಿನ ಮಕ್ಕಳಿಗೆ ಕನ್ನಡದಲ್ಲಿಯೇ ಕಲಿಯಲು ಅವಕಾಶ ಮಾಡಿಕೊಡಬೇಕು’ ಎಂದು ಹೇಳಿದರು.

ಮೋಹನಗೌಡ ಬ. ಪಾಟೀಲ, ಸ.ರಾ. ಸುಳಕೂಡೆ, ಶೈಲಜಾ ಬಿಂಗೆ, ಜಯಶೀಲ ಬ್ಯಾಕೋಡ, ಶಾಂತಾ ಮಸೂತಿ, ಚೇತನ ಏಣಗಿಮಠ ಇದ್ದರು.

ಎಂ.ವೈ. ಮೆಣಸಿನಕಾಯಿ ನಿರೂಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು