ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ | ಭಾರತೀಯ ಹಬ್ಬಗಳ ಮೂಲ ಆಶಯವೇ ಪರಿಸರ ಸಂರಕ್ಷಣೆ: ಮಂಜುನಾಥ ಶರಣಪ್ಪ

Published : 4 ಸೆಪ್ಟೆಂಬರ್ 2024, 13:29 IST
Last Updated : 4 ಸೆಪ್ಟೆಂಬರ್ 2024, 13:29 IST
ಫಾಲೋ ಮಾಡಿ
Comments

ಬೆಳಗಾವಿ: ‘ಭಾರತೀಯ ಹಬ್ಬಗಳು ಪರಿಸರವನ್ನು ಪೂಜಿಸಿ, ಅದರ ಪ್ರಾಮುಖ್ಯತೆಯನ್ನು ಜನಸಾಮಾನ್ಯರಿಗೆ ತಿಳಿಸುತ್ತ ಬಂದಿವೆ. ಮಣ್ಣು, ನೀರು, ಗಾಳಿಯಲ್ಲಿ ದೈವ ಕಾಣುವ ಕಾಣುವ ಭಾರತೀಯ ಹಬ್ಬಗಳ ಮೂಲ ಆಶಯವೇ ಪರಿಸರ ಸಂರಕ್ಷಣೆ’ ಎಂದು ಪ್ರಾಧ್ಯಾಪಕ ಮಂಜುನಾಥ ಶರಣಪ್ಪನವರ ಹೇಳಿದರು.

ಇಲ್ಲಿನ ಶಿವಬಸವ ನಗರದ ಸಿದ್ಧರಾಮೇಶ್ವರ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಡಾ. ಸ.ಜ.ನಾಗಲೋಟಿಮಠ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಪರಿಸರ ಸ್ನೇಹಿ ಗಣೇಶೋತ್ಸವದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಶೋಭಾ ಪೋಳ, ‘ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶನ ಮೂರ್ತಿಗಳ ಬಳಕೆ, ಮಾರಾಟವನ್ನು ಸರ್ಕಾರ ನಿಷೇಧಿಸಿದೆ. ಸಾರ್ವಜನಿಕರು ಅಂಥ ಮೂರ್ತಿ ಬಳಸಬಾರದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಉಪಪ್ರಾಚಾರ್ಯೆ ಮಾತನಾಡಿದರು. ಜಿ.ಎಂ.ಪಾಟೀಲ ಉಪಸ್ಥಿತರಿದ್ದರು. ವಿಜ್ಞಾನ ಕೇಂದ್ರದ ಯೋಜನಾಧಿಕಾರಿ ರಾಜಶೇಖರ ಪಾಟೀಲ ಸ್ವಾಗತಿಸಿದರು. ಮನೋಹರ ಉಳ್ಳೇಗಡ್ಡಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT