ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುವರ್ಣ ವಿಧಾನಸೌಧದಲ್ಲಿ ಸ್ಥಾಪನೆಗೆ ಆಗ್ರಹ

Last Updated 23 ಸೆಪ್ಟೆಂಬರ್ 2021, 12:50 IST
ಅಕ್ಷರ ಗಾತ್ರ

ಬೆಳಗಾವಿ: ‘ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಜಂಟಿ ನಿರ್ದೇಶಕರ ಬೆಳಗಾವಿ ವಿಭಾಗದ ಕಚೇರಿಗೆ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸ್ಥಳಾವಕಾಶ ಮಾಡಿಕೊಡಬೇಕು. ಈ ಮೂಲಕ ಏಳು ಜಿಲ್ಲೆಗಳ ಜನರಿಗೆ ಅನುಕೂಲ ಕಲ್ಪಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿಗೆ ಗುರುವಾರ ಮನವಿ ಸಲ್ಲಿಸಲಾಗಿದೆ.

ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯಲ್ಲಿಯೇ ಇರಲಿ:

‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇತ್ತೀಚೆಗೆ ವಿಭಾಗವಾರು ಜಂಟಿ ನಿರ್ದೇಶಕರ ಹುದ್ದೆಯನ್ನು ಸೃಷ್ಟಿಸಿ ಬೆಳಗಾವಿಗೆ ಈ ಹುದ್ದೆ ನೀಡಿದ್ದು ಸ್ವಾಗತಾರ್ಹ. ಆದರೆ, ಈ ಕಚೇರಿಯನ್ನು ಧಾರವಾಡಕ್ಕೆ ಸ್ಥಳಾಂತರ ಮಾಡಬೇಕೆಂದು ಹುನ್ನಾರ ನಡೆಸಿರುವುದು ಖಂಡನೀಯ’ ಎಂದು ಸಾಹಿತಿ ಯ.ರು. ಪಾಟೀಲ ಹೇಳಿದ್ದಾರೆ.

ಈ ಬಗ್ಗೆ ಗುರುವಾರ ಪ್ರಕಟಣೆ ನೀಡಿರುವ ಅವರು, ‘ಈ ಹುದ್ದೆಯನ್ನು ಬೆಳಗಾವಿಗೆ ಏಕೆ ನೀಡಬೇಕೆಂದು ಸರ್ಕಾರಕ್ಕೆ ಗೊತ್ತಿದೆ. ಆ ಪ್ರಕಾರ ನೀಡಿದ್ದಾರೆ ಮತ್ತು ಅದು ಸೂಕ್ತ ಕೂಡ. ಬೆಳಗಾವಿಯಂತಹ ಗಡಿ ಭಾಗದಲ್ಲಿ ಉನ್ನತ ಮಟ್ಟದ ಕಚೇರಿಗಳು ಬರುವುದರಿಂದ ಕನ್ನಡ ರಕ್ಷಣೆ ಮತ್ತು ಬೆಳವಣಿಗೆಗೆ ಬಹಳ ಅನುಕೂಲ ಆಗುತ್ತದೆ. ಹೀಗಿರುವಾಗ ನೆರೆಯ ಧಾರವಾಡ ಜಿಲ್ಲೆಯವರು ಕಚೇರಿಯನ್ನು ಕಸಿದುಕೊಳ್ಳುವುದು ಯಾವ ನ್ಯಾಯ? ಈ ಕುರಿತು ಚುನಾಯಿತ ಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಒತ್ತಾಯಿಸಿದ್ದಾರೆ.

‘ಹುದ್ದೆಯನ್ನು ಸೃಷ್ಟಿಸಿ ಕೈತೊಳೆದುಕೊಳ್ಳುವುದು ಮುಖ್ಯವಲ್ಲ. ಸೂಕ್ತ ಸಿಬ್ಬಂದಿ ಮತ್ತು ಸ್ಥಳಾವಕಾಶ ನೀಡುವ ಕಾರ್ಯವೂ ಆಗಬೇಕಾಗುತ್ತದೆ. ಈ ನಿಟ್ಟಿನಲ್ಲೂ ಸರ್ಕಾರ ಗಮನಹರಿಸಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT