ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತೀಶ ಶುಗರ್ಸ್: ಎಥೆನಾಲ್ ಘಟಕ ಉದ್ಘಾಟನೆ

Last Updated 26 ಜನವರಿ 2022, 16:51 IST
ಅಕ್ಷರ ಗಾತ್ರ

ಗೋಕಾಕ: ‘ದೇಶದಲ್ಲಿ ಪ್ರತಿ ವರ್ಷ ಬೇಡಿಕೆಗಿಂತಲೂ ಅಧಿಕ ಕಬ್ಬು ಬೆಳೆಯಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳು ಸಕ್ಕರೆಯನ್ನಷ್ಟೆ ಉತ್ಪಾದನೆ ಮಾಡುತ್ತಿರುವುದರಿಂದ ಅಷ್ಟೊಂದು ಲಾಭ ದೊರೆಯುತ್ತಿಲ್ಲ’ ಎಂದು ಸತೀಶ ಶುಗರ್ಸ್ ಕಾರ್ಖಾನೆ ಅಧ್ಯಕ್ಷ ಹಾಗೂ ಸಿಎಫ್‌ಒ ಪ್ರದೀಪಕುಮಾರ ಇಂಡಿ ಹೇಳಿದರು.

ತಾಲ್ಲೂಕಿನ ಹುಣಶ್ಯಾಳ ಪಿ.ಜಿ. ಗ್ರಾಮದ ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ ಎಥೆನಾಲ್ ಉತ್ಪಾದನಾ ಘಟಕವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಕ್ಕರೆ ಉತ್ಪಾದಿಸಿದ ಬಳಿಕ ಮಾರುಕಟ್ಟೆಯಲ್ಲಿ ದರ ಕಡಿಮೆ ಇದ್ದರೆ ಅದನ್ನು ಶೇಖರಣೆ ಮಾಡಿಕೊಳ್ಳಬೇಕು. ಹೀಗೆ ದಾಸ್ತಾನು ಮಾಡಲಾದ ಸಕ್ಕರೆಯು ಮಳೆ, ಗಾಳಿಯಿಂದ ಉಂಟಾಗುವ ವಾತಾವರಣ ಬದಲಾವಣೆಯಿಂದ ಹಾನಿಗೆ ತುತ್ತಾಗಿ ನಷ್ಟ ಅನುಭವಿಸ ಬೇಕಾಗುತ್ತದೆ’ ಎಂದು ಸಮಸ್ಯೆಯನ್ನು ಬಿಚ್ಚಿಟ್ಟರು.

‘ಸಕ್ಕರೆ ಕಾರ್ಖಾನೆಗಳು ಆರ್ಥಿಕ ಸಂಕಷ್ಟಕ್ಕೆ ತುತ್ತಾಗುತ್ತಿವೆ. ಆದ್ದರಿಂದ ಕೇಂದ್ರ ಸರ್ಕಾರವು ಪರಿಸರ ಸ್ನೇಹಿ ಇಂಧನ ಮತ್ತು ಪರ್ಯಾಯ ಇಂಧನಗಳ ಬಳಕೆಯನ್ನು ಉತ್ತೇಜಿಸಲು ಎಥೆನಾಲ್ ಮಿಶ್ರಿತ ಪೆಟ್ರೋಲ್ (ಇಬಿಪಿ) ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಇದರಿಂದ ದೇಶದಲ್ಲಿ ಸಕ್ಕರೆ ಉತ್ಪಾದನೆಯನ್ನು ಮಿತಿಗೊಳಿಸಿ ಎಥೆನಾಲ್ ಉತ್ಪಾದನೆಯನ್ನು ವೃದ್ಧಿಸಿ, ಕಚ್ಚಾ ತೈಲದ ಆಮದು ಅವಲಂಬನೆ ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ಇದರಿಂದ ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಿದಂತಾಗುತ್ತದೆ’ ಎಂದು ವಿವರಿಸಿದರು.

‘ಕೇಂದ್ರವು 2022ರಲ್ಲಿ ಪೆಟ್ರೋಲ್‌ನಲ್ಲಿ ಶೇ. 10ರಷ್ಟು ಹಾಗೂ 2025ರ ವೇಳೆಗೆ ಶೇ. 20ರಷ್ಟು ಎಥೆನಾಲ್ ಮಿಶ್ರಣ ಮಾಡಲು ಯೋಜಿಸಿದೆ. ಎಥೆನಾಲ್ ಪರ್ಯಾಯ ಇಂಧನವಾಗಿ ಬಳಕೆ ಆಗುವುದರಿಂದ ಕಾರ್ಖಾನೆಗಳು ಆರ್ಥಿಕ ನಷ್ಟದಿಂದ ಹೊರಬರಬಹುದು. ಕಬ್ಬು ಬೆಳೆಗಾರರಿಗೆ ಶೀಘ್ರವೇ ದರ ಪಾವತಿಸಲು ಮತ್ತು ಅವರ ಆದಾಯವನ್ನೂ ವೃದ್ಧಿಸಲು ಸಹಾಯ ಆಗಲಿದೆ. ಅದರೊಂದಿಗೆ ಗ್ರಾಮೀಣ ಭಾಗದ ಜನರಿಗೆ ಉದ್ಯೋಗಾವಕಾಶಗಳು ಹೆಚ್ಚಲಿವೆ’ ಎಂದು ಮಾಹಿತಿ ನೀಡಿದರು.

ರಿಗ್ರೀನ್ಎಕ್ಸಲ್ ಇಪಿಸಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಯೋಜನಾ ನಿರ್ದೇಶಕ ಕಿರಣ ಗೌಳಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT