ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾತಂತ್ರ್ಯ ಅಮೃತ ಮಹೋತ್ಸವ ವಿಶೇಷ: ಮರೆತುಹೋದ ಮಹನೀಯರ ಮಾಹಿತಿ

75 ಸ್ವಾತಂತ್ರ್ಯ ಸೇನಾನಿಗಳ ಭಾವಚಿತ್ರ ‍ಪ್ರದರ್ಶನ
Last Updated 14 ಆಗಸ್ಟ್ 2022, 4:10 IST
ಅಕ್ಷರ ಗಾತ್ರ

ಬೆಳಗಾವಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಶಾಸಕ ಅಭಯ ಪಾಟೀಲ ಅವರು ಇಲ್ಲಿನ ತಿನಿಸು ಕಟ್ಟೆಯಲ್ಲಿ ಆಯೋಜಿಸಿದ ‘ಮರೆತುಹೋದ 75 ಸ್ವಾತಂತ್ರ್ಯ ಸೇನಾನಿಗಳ ಮಾಹಿತಿ ಪ್ರದರ್ಶನ’ ಕಾರ್ಯಕ್ರಮಕ್ಕೆ ಶನಿವಾರ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ದೀಪ ಬೆಳಗಿಸುವ ಮೂಲಕ ಈ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿವಿಧ ಕಲಾತಂಡಗಳಿಂದ ನೃತ್ಯ, ಸಂಗೀತ ಹಾಗೂ ಹಾಸ್ಯ ಮನರಂಜನಾ ಕಾರ್ಯಕ್ರಮಗಳೂ ಜರುಗಿದವು.

ಎಂದೂ, ಎಲ್ಲಿಯೂ ಕಾಣದವರು ಇವರು: ದೇಶಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಅನೇಕ ಮಹನೀಯರ ಇತಿಹಾಸ ಇವತ್ತಿನ ಪೀಳಿಗೆಗೆ ಪರಿಚಯವಿಲ್ಲ. ಅದನ್ನು ಪರಿಚಯಿಸುವ ನಿಟ್ಟಿನಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರ ಶಾಸಕ ಅಭಯ ಪಾಟೀಲ ಅವರು ಸಂಗ್ರಹಿಸಿದ 75 ಕ್ರಾಂತಿಕಾರಿಗಳ ಭಾವಚಿತ್ರ ಹಾಗೂ ಮಾಹಿತಿ ಫಲಕಗಳ ಪ್ರದರ್ಶನ ಇದಾಗಿದೆ. ಸದ್ಯ ಸಾಂಕೇತಿಕವಾಗಿ ಉದ್ಘಾಟನೆ ಮಾಡಲಾಗಿದ್ದು, ಭಾನುವಾರದಿಂದ ಎಲ್ಲ ಕ್ರಾಂತಿಕಾರಿಗಳ ಮಾಹಿತಿ ಇಲ್ಲಿ ಸಿಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT