‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ. ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.