ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯವರೆಗೆ ವಂದೇ ಭಾರತ್‌ ರೈಲು ವಿಸ್ತರಣೆ: ಈರಣ್ಣ ಕಡಾಡಿ

Published 15 ನವೆಂಬರ್ 2023, 13:54 IST
Last Updated 15 ನವೆಂಬರ್ 2023, 13:54 IST
ಅಕ್ಷರ ಗಾತ್ರ

ಮೂಡಲಗಿ: ಬೆಂಗಳೂರು–ಧಾರವಾಡ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ, ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನಿಂದ ಬೆಳಿಗ್ಗೆ 5.45ಕ್ಕೆ ಹೊರಡಲಿರುವ ರೈಲು (ಸಂಖ್ಯೆ 20661) ಮಧ್ಯಾಹ್ನ 1.30ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ 2 ಗಂಟೆಗೆ ಹೊರಡಲಿರುವ ರೈಲು (ಸಂಖ್ಯೆ 20662) ರಾತ್ರಿ 10.10ಕ್ಕೆ ಬೆಂಗಳೂರು ತಲುಪಲಿದೆ. ಶ್ರೀಘ್ರವೇ ರೈಲು ಸಂಚಾರದ ದಿನಾಂಕ ನಿಗದಿಯಾಗಲಿದೆ ಎಂದು ತಿಳಿಸಿದ್ದಾರೆ.

ಅಂಗಡಿ ಹರ್ಷ: ‘ವಂದೇ ಭಾರತ್‌’ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿರುವುದಕ್ಕೆ ಸಂಸದೆ ಮಂಗಲಾ  ಅಂಗಡಿ ಹರ್ಷ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ನಿವಾಸಿಗಳ ಹಲವು ದಿನಗಳ ಬೇಡಿಕೆ ಈಗ ಈಡೇರಿದೆ. ಪ್ರಯಾಣಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT