ಬೆಳಗಾವಿ: ‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಡುತ್ತಿರುವ ಪ್ರಸ್ತುತ ಸನ್ನಿವೇಶದಲ್ಲಿ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡು ಎಂಬಂತೆ ಸತ್ಯಾಸತ್ಯತೆ ಪರಾಮರ್ಶಿಸಿದ ಬಳಿಕವೇ ಮಾಧ್ಯಮದಲ್ಲಿ ಪ್ರಕಟಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪತ್ರಕರ್ತರಿಗೆ ಏರ್ಪಡಿಸಿದ್ದ ‘ಫ್ಯಾಕ್ಟ್ ಚೆಕ್’ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

‘ವೈರಲ್ ಆಗುವ ಸುಳ್ಳು ಸುದ್ದಿಗಳ ಪೋಸ್ಟ್ಗಳಿಂದ ಕೆಲವೊಮ್ಮೆ ಜನರಲ್ಲಿ ಆತಂಕ ಉಂಟಾಗುತ್ತದೆ. ಆದ್ದರಿಂದ ಇಂತಹ ಸುದ್ದಿಗಳು ಬಂದಾಗ ಪರಿಶೀಲಿಸುವ ಮೂಲಕ ಜನರಿಗೆ ಸರಿಯಾದ ಮಾಹಿತಿಯನ್ನು ನೀಡುವ ಕೆಲಸವನ್ನು ಪತ್ರಕರ್ತರು ಮಾಡಬೇಕು’ ಎಂದರು.

‘ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿರುವ ಸುಳ್ಳು ಸುದ್ದಿ ಹರಡುವವರನ್ನು ಗುರುತಿಸಿ ಶಿಕ್ಷಿಸುವ ಅಗತ್ಯವಿದೆ’ ಎಂದು ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ‘ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಸುದ್ದಿಗಳ ಸತ್ಯಾಸತ್ಯತೆ ಪತ್ತೆಹಚ್ಚುವ ವಿಧಾನಗಳನ್ನು ಪತ್ರಕರ್ತರಿಗೆ ತಿಳಿಸುವ ಉದ್ದೇಶದಿಂದ ತರಬೇತಿ ಆಯೋಜಿಸಲಾಗಿದೆ’ ಎಂದರು.

‘ಗೂಗಲ್’ನಿಂದ ತರಬೇತಿ ಪಡೆದಿರುವ ಪತ್ರಕರ್ತ ಪ್ರಮೋದ್ ಹರಿಕಾಂತ ಪ್ರಾತ್ಯಕ್ಷಿಕೆ ಮೂಲಕ ‘ಫ್ಯಾಕ್ಟ್ ಚೆಕ್’ ಕುರಿತು ಮಾತನಾಡಿದರು.

ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳ 30 ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.