ಶನಿವಾರ, ಜೂನ್ 19, 2021
27 °C

ಬೆಳಗಾವಿ: ನ್ಯಾಯಬೆಲೆ ಅಂಗಡಿ ಲೈಸೆನ್ಸ್ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ನಿಗದಿಪಡಿಸಿದಂತೆ ಪಡಿತರ ವಿತರಿಸದೇ ಇರುವ, ಕಾರ್ಡ್‌ದಾರರ ಜೊತೆ ಸೌಜನ್ಯತೆಯಿಂದ ವರ್ತಿಸದೇ ಇರುವ ಹಾಗೂ ಸಮಯಕ್ಕೆ ಸರಿಯಾಗಿ ಅಂಗಡಿ ತೆರೆಯದೇ ಇದ್ದುದರಿಂದ ಅಲಾರವಾಡದ ನ್ಯಾಯಬೆಲೆ ಅಂಗಡಿ ಸಂಖ್ಯೆ 237 ಅನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಅಮಾನತುಪಡಿಸಿದ್ದಾರೆ.

ಈ ನ್ಯಾಯಬೆಲೆ ಅಂಗಡಿಯ ಬಗ್ಗೆ ಪಡಿತರ ಚೀಟಿದಾರರು ಸಾಕಷ್ಟು ದೂರುಗಳನ್ನು ಸಲ್ಲಿಸಿದ್ದರು. ದೂರಿನ ಮೇರೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತನಿಖೆ ಮಾಡಿ ವರದಿ ನೀಡಿದ್ದರು.

ಈ ವರದಿಯ ಅನ್ವಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ ಅಮಾನತುಗೊಳಿಸಿದ್ದಾರೆ. ಇತರ ನ್ಯಾಯ ಬೆಲೆ ಅಂಗಡಿಯವರು ಸರ್ಕಾರ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಚೀಟಿದಾರರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಕ್ರಮ ಖಚಿತ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು