ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತ್ರೆ ಸಾಮರಸ್ಯದ ಸಂಕೇತ: ಸನತ್ ಜಾರಕಿಹೊಳಿ

Published 25 ನವೆಂಬರ್ 2023, 6:57 IST
Last Updated 25 ನವೆಂಬರ್ 2023, 6:57 IST
ಅಕ್ಷರ ಗಾತ್ರ

ಗೋಕಾಕ: ಜಾತ್ರೆಗಳು ನಾಗರಿಕರಲ್ಲಿ ಭಾವನಾತ್ಮಕ ಗುಣಗಳನ್ನು ಬೆಳೆಸುತ್ತವೆ. ಗ್ರಾಮಸ್ಥರು ಸೇರಿದಂತೆ ಸುತ್ತಲಿನ ಭಕ್ತರು ಒಂದಡೆ ಸೇರಿ ಹಬ್ಬ ಆಚರಿಸುವುದು ಮಹತ್ವದ್ದಾಗಿದೆ ಎಂದು ಲಕ್ಷ್ಮಿ ಎಜುಕೇಷನ್ ಟ್ರಸ್ಟ್‌ನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ ಹೇಳಿದರು .

ಶುಕ್ರವಾರ ತಾಲ್ಲೂಕಿನ ಕೊಣ್ಣೂರ ಸಮೀಪದ ನವಿಲಮಾಳ ಸೀಮಿ ದ್ಯಾಮವ್ವಾದೇವಿಯ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವಗಳು ಎಲ್ಲ ಸಮುದಾಯದವರನ್ನು ಒಗ್ಗಟ್ಟಿಸುವ ಸಾಮರಸ್ಯದ ಸಂಕೇತವಾಗಿದ್ದು, ಧಾರ್ಮಿಕ ಆಚರಣೆಗಳು ಮನುಷ್ಯನ ಅವಿಭಾಜ್ಯ ಅಂಗಗಳಾಗಿವೆ. ಶರಣರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರ ನಮ್ಮ ಬದುಕಿಗೆ ನಿಜ ಅರ್ಥ ಲಭಿಸುತ್ತದೆ ಎಂದರು.

ಪ್ರತಿಯೊಬ್ಬರು ಧಾರ್ಮಿಕ ಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಗ್ರಾಮೀಣ ಜನತೆ ದುಶ್ಚಟಗಳಿಗೆ ದಾಸರಾಗುತ್ತಿರುವುದರಿಂದ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಇದರಿಂದ ಹೊರ ಬೇಕಾದರೆ ಅಧ್ಯಾತ್ಮಿಕ ನೆಲೆಗಟ್ಟಿನಲ್ಲಿ ಬದುಕು ಸಾಗಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು.

ಪತ್ರಕರ್ತರ ಸಂಘದ ಜಿಲ್ಲಾ ಸಂಚಾಲಕ ಸುರೇಶ ಪಾಟೀಲ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗುರು ಪೂಜೇರಿ,  ಸಾಧಿಕ್ ಹಲ್ಯಾಳ, ಪಪ್ಪು ಹಂದಿಗುಂದ, ಕೆಂಪಣ್ಣ ಹಕ್ಯಾಗೋಳ, ಲಕ್ಷ್ಮಣ ಶಿವನಪ್ಪಗೋಳ, ಲಗಮಣ್ಣ ಪೂಜೇರಿ, ಹನುಮಂತ ವಗ್ಗನ್ನವರ, ಸುನೀಲ್ ಹಮ್ಮನ್ನವರ, ಯಲಪ್ಪ ಸಜಲಿ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT