ಮಂಗಳವಾರ, ಜನವರಿ 21, 2020
20 °C
ರಾಜಕೀಯ ಪ್ರಭಾವ ಬಳಸಿ ಅಧಿಕಾರ ದುರುಪಯೋಗ

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಸುಳ್ಳು ದಾಖಲೆ ಸೃಷ್ಟಿ: ಮೋದಗಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಇಲ್ಲಿನ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೋದಗಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿದ್ದಾರೆ. ರಾಜಕೀಯ ಪ್ರಭಾವ ಬಳಸಿಕೊಂಡು ಅಧಿಕಾರ ದುರುಪಯೋಗ ಪಡೆಸಿಕೊಂಡಿದ್ದಾರೆ’ ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಸಿದಗೌಡ ಮೋದಗಿ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಹಕಾರ ಕ್ಷೇತ್ರದಲ್ಲಿ ಬೆಳೆಯಲು ರಾಜಕೀಯ ಪ್ರಭಾವ ಬಳಸಿಕೊಂಡಿದ್ದಾರೆ. ಖಾನಾಪುರ ತಾಲ್ಲೂಕಿನ ಚಿಕ್ಕಹಟ್ಟಿಹೊಳಿ ಗ್ರಾಮದ ಚನ್ನರಾಜ, ಮೋದಗಾ ಗ್ರಾಮದ ರಹವಾಸಿಯೆಂದು ಸುಳ್ಳು ಪ್ರಮಾಣಪತ್ರ ಪಡೆದಿದ್ದಾರೆ. ರಹವಾಸಿ ಪ್ರಮಾಣಪತ್ರ ನೀಡುವುದು ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುತ್ತದೆ. ಆದರೆ, ಅವರು ಮೋದಗಾ ಗ್ರಾಮ ಪಂಚಾಯಿತಿಯಿಂದ ಪಡೆದಿದ್ದಾರೆ. ಪ್ರಮಾಣಪತ್ರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಬಾಬು ಸಹಿ ಮಾಡಿದ್ದಾರೆ’ ಎಂದು ತಿಳಿಸಿದರು.

‘ನಕಲಿ ದಾಖಲೆಗಳನ್ನು ಪಡೆಯುವುದು ಹಾಗೂ ಕೊಡುವುದು ಕಾನೂನು ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ. ಇಲ್ಲಿ ಕಾನೂನು ಮತ್ತು ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ರಹವಾಸಿ ಪ್ರಮಾಣಪತ್ರ ಪರಿಶೀಲಿಸದೇ ಸಂಘದ ಸದಸ್ಯತ್ವ ನೀಡಿರುವ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಹಾಗೂ ಸಹಕಾರ ಇಲಾಖೆಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಈ ಕುರಿತು ನಗರ ಪೊಲೀಸ್‌ ಆಯುಕ್ತ, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಮತ್ತು ಸಹಕಾರ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ’ ಎಂದು ತಿಳಿಸಿದರು.

ಮುಖಂಡರಾದ ಆರ್.ಎಸ್. ದರ್ಗೆ, ಸುರೇಶ ಮರಲಿಂಗಣ್ಣವರ, ಅಡಿವೆಪ್ಪ ಕುಂದರಗಿ ಇದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು