ಮಂಗಳವಾರ, ನವೆಂಬರ್ 29, 2022
28 °C

ಬೆಳಗಾವಿ: ಎಸ್ಪಿ ಡಾ.ಸಂಜೀವ ಪಾಟೀಲ ಹೆಸರಲ್ಲೇ ಇನ್‌ಸ್ಟಾಗ್ರಾಂ ನಕಲಿ ಖಾತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಅವರ ಹೆಸರು ಹಾಗೂ ಚಿತ್ರಗಳನ್ನು ಬಳಸಿ ಇನ್‌ಸ್ಟಾಗ್ರಾಂ ಖಾತೆ ತೆರೆದ ದುಷ್ಕರ್ಮಿಗಳು, ಜನರಿಂದ ಹಣ ಕೇಳಿದ ಪ್ರಕರಣ ಬೆಳಕಿಗೆ ಬಂದಿದೆ.

ಸ್ವತಃ ಡಾ.ಸಂಜೀವ ಅವರೇ ಸಾರ್ವಜನಿಕರ ಗಮನಕ್ಕೆ ಈ ಮಾಹಿತಿ ಹಂಚಿಕೊಂಡಿದ್ದಾರೆ. ಅವರು ಬೆಂಗಳೂರಿನಲ್ಲಿ ಡಿಸಿಪಿ ಆಗಿದ್ದಾಗಿನ ಹುದ್ದೆ, ಫೋಟೊಗಳನ್ನು ಈ ಖಾತೆಗೆ ಬಳಸಿಕೊಳ್ಳಲಾಗಿದೆ. ಜನರಿಗೆ ಮೆಸೇಜ್‌ ಮಾಡಿ ಹಣ ಕೂಡ ಕೇಳಿದ್ದಾರೆ. ಇದನ್ನು ಯಾರೂ ನಂಬಬಾರದು. ಈ ಅಕ್ರಮ ಎಸಗಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ಉದ್ಯಮಿಗಳು, ಶಿಕ್ಷಕರು, ಪತ್ರಕರ್ತರು, ಅನಾಥಾಶ್ರಮ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆ ತೆರೆದು ಸಹಾಯಕ್ಕಾಗಿ ಹಣ ಕೇಳುವ ಪ್ರಕರಣಗಳು ನಡೆಯುತ್ತಲೇ ಇವೆ. ಈಗ ಸ್ವತಃ ಪೊಲೀಸ್‌ ಅಧಿಕಾರಿ ಹೆಸರಲ್ಲೇ ನಕಲಿ ಖಾತೆ ಸೃಷ್ಠಿಸಿದ್ದು ‘ಆನ್‌ಲೈನ್‌ ಕಳ್ಳರ’ ಕೈಚಳಕಕ್ಕೆ ಸಾಕ್ಷಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು