ಸುಳ್ಳು ಸುದ್ದಿ ಹರಡಿದ ಇಬ್ಬರ ವಿರುದ್ಧ ಪ್ರಕರಣ

ಗುರುವಾರ , ಜೂನ್ 27, 2019
29 °C

ಸುಳ್ಳು ಸುದ್ದಿ ಹರಡಿದ ಇಬ್ಬರ ವಿರುದ್ಧ ಪ್ರಕರಣ

Published:
Updated:

ಬೆಳಗಾವಿ: ಹಿರೇಬಾಗೇವಾಡಿಯ ಎಪಿಎಂಸಿ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಶನಿವಾರ ಪತ್ತೆಯಾಗಿತ್ತು. ‘ಈ ಯುವಕ ಗೋವುಗಳ ಅಕ್ರಮ ಸಾಗಣೆ ವಿರುದ್ಧ ದನಿ ಎತ್ತಿದ್ದ. ಹೀಗಾಗಿ, ಕೊಲೆ ಮಾಡಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದ ಇಬ್ಬರ ವಿರುದ್ಧ ಗೋಕಾಕ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಎಸ್ಪಿ ಸುಧೀರ್‌ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

ಗೋಕಾಕ ತಾಲ್ಲೂಕಿನ ಅಡಿವೆಪ್ಪನ ಅಂಕಲಗಿ ಗ್ರಾಮದ ಶಿವಕುಮಾರ ಉಪ್ಪಾರ (19) ಮೃತ.

ಘಟನೆ ಕುರಿತು ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಬೆಳಗಾವಿಯ ಶಾರದಾಂಬಿಕಾ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. 5–6 ತಿಂಗಳುಗಳಿಂದ ಬಜರಂಗ ದಳದಲ್ಲಿ ಕಾರ್ಯಕರ್ತನಾಗಿ, ಆ ಸಂಘಟನೆಯ ಹುಡುಗರೊಂದಿಗೆ ತಿರುಗಾಡುತ್ತಿದ್ದ. ಯಾವುದೋ ವಿಷಯವನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಅದರಿಂದ ಗಾಬರಿಗೊಂಡು ಹಿರೇಬಾಗೇವಾಡಿ ಎಪಿಎಂಸಿ ಮಾರ್ಕೆಟ್‌ನ ಸಾರ್ವಜನಿಕ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವರ ಸಾವಿನ ಬಗ್ಗೆ ಯಾವುದೇ ಸಂಶಯವಿಲ್ಲ’ ಎಂದು ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ಕುರಿತು ಸುಳ್ಳು ಸುದ್ದಿ ಹಬ್ಬಿಸಿ, ದ್ವೇಷದ ಮನೋಭಾವಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಭಾನುವಾರ ಇಬ್ಬರನ್ನು ಬಂಧಿಸಲಾಗಿದೆ. ಕಂಕಣವಾಡಿಯ ಅರ್ಜುನ ಮುತ್ತೆಪ್ಪ ಬಸರಗಿ (31) ಹಾಗೂ ಸವದತ್ತಿ ತಾಲ್ಲೂಕು ಹಿರೇಕುಂಬಿಯ ಫಕ್ಕೀರಪ್ಪ ರಮೇಶ ತಳವಾರ (28) ಬಂಧಿತರು. ಇವರು ಕ್ರಮವಾಗಿ ಫೇಸ್‌ಬುಕ್‌ ಹಾಗೂ ವಾಟ್ಸ್‌ಆ್ಯಪ್‌ನಲ್ಲಿ ಸುಳ್ಳು ಸುದ್ದಿ ಹರಡುತ್ತಿದ್ದರು. ಎಲ್ಲ ಪೋಸ್ಟ್‌ಗಳನ್ನು ಕೂಡ ಪರಿಶೀಲಿಸಿದ್ದೇವೆ. ಹಿಂಸೆಗೆ ಪ್ರಚೋದಿಸುವ ಪೋಸ್ಟ್‌ ಹಾಕಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !