ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಡಳಿತದಲ್ಲಿ ಮೇಘಣ್ಣವರ ಛಾಪು ಅಳಿಸಲಾಗದು’

ಸೇವಾ ನಿವೃತ್ತಿ, ಅಧಿಕಾರಿಗಳಿಂದ ಆತ್ಮೀಯ ಬೀಳ್ಕೊಡುಗೆ
Last Updated 1 ಆಗಸ್ಟ್ 2019, 11:55 IST
ಅಕ್ಷರ ಗಾತ್ರ

ಬೆಳಗಾವಿ: ವಿವಿಧ ಉನ್ನತ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಸೇವಾ ನಿವೃತ್ತಿ ಹೊಂದಿದ ಪ್ರಾದೇಶಿಕ ಆಯುಕ್ತ ಪಿ.ಎ. ಮೇಘಣ್ಣವರ ಅವರನ್ನು ಜಿಲ್ಲಾಡಳಿತ, ನಗರಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಬುಧವಾರ ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಡುಗೆ ನೀಡಿದರು.

‌ವಿವಿಧ ಜಿಲ್ಲೆಯ ಜಿಲ್ಲಾಧಿಕಾರಿಗಳು ಅವರೊಂದಿಗಿನ ಒಡನಾಟವನ್ನು ಮೆಲುಕು ಹಾಕಿದರು. ಆಡಳಿತದಲ್ಲಿ ಅವರು ಮೂಡಿಸಿದ ಛಾಪು ಅಳಿಸಲಾಗದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಳಗಾವಿ ಜಿಲ್ಲಾಡಳಿತ ಪರವಾಗಿ ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅವರು ಮೇಘಣ್ಣವರ ದಂಪತಿಯನ್ನು ಸನ್ಮಾನಿಸಿದರು. ಬಳಿಕ ವಿಭಾಗ ವ್ಯಾಪ್ತಿಯ ಗದಗ, ಬಾಗಲಕೋಟೆ, ಉತ್ತರ ಕನ್ನಡ, ವಿಜಯಪುರ ಜಿಲ್ಲಾಧಿಕಾರಿಗಳು ಸನ್ಮಾನಿಸಿದರು.

ಬಾಗಲಕೋಟೆ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್ ಮಾತನಾಡಿ, ‘ಸರ್ಕಾರಿ ಕೆಲಸದಲ್ಲಿ ಕೇವಲ ಭೌತಿಕ ಪ್ರಗತಿಗೆ ಒತ್ತು ಕೊಡದೇ ಗುಣಮಟ್ಟದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದ ಮೇಘಣ್ಣವರ ಅವರು ಪ್ರತಿ ಕೆಲಸದಲ್ಲೂ ಆಳವಾಗಿ ಅಧ್ಯಯನ ಮಾಡಿಕೊಂಡು ಬರುತ್ತಿದ್ದರು. ಈ ಮೂಲಕ ನಮ್ಮಂತಹ ಅಧಿಕಾರಿಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಆಡಳಿತದಲ್ಲಿ ಅವರು ಮೂಡಿಸಿದ ಹೆಜ್ಜೆ ಗುರುತುಗಳು ಕಿರಿಯರಿಗೆ ಮಾರ್ಗದರ್ಶಿಯಾಗಿವೆ’ ಎಂದರು.

ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಬಾಗಲಕೋಟೆ ಜಿಲ್ಲಾ ಪಂಚಾಯ್ತಿ ಸಿಇಒ ಗಂಗೂಬಾಯಿ ಮಾನಕರ, ಇಲ್ಲಿನ ನಗರಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ಮಾತನಾಡಿದರು.

ಬುಧವಾರವೇ ಸೇವಾ ನಿವೃತ್ತಿ ಹೊಂದಿದ ಪಶುವೈದ್ಯಕೀಯ ಮತ್ತು ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಿ.ಎಸ್. ಹವಾಲ್ದಾರ ಅವರನ್ನು ಕೂಡ ಸನ್ಮಾನಿಸಿ, ಬೀಳ್ಕೊಡಲಾಯಿತು.

ಉತ್ತರ ಕನ್ನಡ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಉತ್ತರ ವಲಯ ಐಜಿಪಿ ಎಚ್.ಜಿ. ರಾಘವೇಂದ್ರ ಸುಹಾಸ್, ಬೆಳಗಾವಿ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್, ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ಹುಬ್ಬಳ್ಳಿ-ಧಾರವಾಡ ನಗರಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಹೆಚ್ಚುವರಿ ಪ್ರಾದೇಶಿಕ ಆಯುಕ್ತ ರಮೇಶ ಕಳಸದ, ಉಪ ವಿಭಾಗಾಧಿಕಾರಿಗಳಾದ ಡಾ.ಕವಿತಾ ಯೋಗಪ್ಪನವರ, ಶಿವಾನಂದ ಭಜಂತ್ರಿ ಪಾಲ್ಗೊಂಡಿದ್ದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್‌.ಬಿ. ಬೂದೆಪ್ಪ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT