ಸೋಮವಾರ, ಅಕ್ಟೋಬರ್ 14, 2019
22 °C

ಅಂಬೇವಾಡಿ: ರೈತ ಆತ್ಮಹತ್ಯೆ

Published:
Updated:

ಬೆಳಗಾವಿ: ತಾಲ್ಲೂಕಿನ ಅಂಬೇವಾಡಿಯಲ್ಲಿ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾರುತಿ ನಾರಾಯಣ ರಾಕ್ಷೆ (60) ಮೃತರು.

‘ಅವರು ಭತ್ತ ಹಾಗೂ ಆಲೂಗಡ್ಡೆ ಬೆಳೆದಿದ್ದರು. ಕಳೆದ ತಿಂಗಳು ಸುರಿದ ಧಾರಾಕಾರ ಮಳೆಯಿಂದಾಗಿ ಬೆಳೆ ಕೊಚ್ಚಿ ಹೋಗಿತ್ತು. ಸರ್ಕಾರದಿಂದ ಬೆಳೆ ಪರಿಹಾರ ಬಂದಿರಲಿಲ್ಲ. ಹೀಗಾಗಿ, ವಿಷ ಸೇವಿಸಿದ್ದಾರೆ’ ಎಂದು ಕುಟುಂಬದವರು ತಿಳಿಸಿದರು.

ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಕಾಕತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post Comments (+)