ಭಾನುವಾರ, ಜುಲೈ 25, 2021
26 °C

ಮುಂಗಾರು ಹಂಗಾಮು: ಬೆಳೆ ಸಮೀಕ್ಷೆ ‘ಆ್ಯಪ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಜಿಲ್ಲೆಯಲ್ಲಿ 2021–22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಮೊಬೈಲ್ ಆ್ಯಪ್‌ ಮೂಲಕ ದಾಖಲಿಸುವ ಯೋಜನೆಯನ್ನು ಸರ್ಕಾರದಿಂದ ಪ್ರಾರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

‘ಹಂಗಾಮಿನಲ್ಲಿ ರೈತರು ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರಸಹಿತ ಅಪ್‌ಲೋಡ್ ಮಾಡಬಹುದಾಗಿದೆ. ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ, ಹಾಗೂ ಸಾಂಖಿಕ ಇಲಾಖೆ ಜಂಟಿ ಸಹಯೋಗದಲ್ಲಿ ಸಮೀಕ್ಷೆ ನಡೆಯಲಿದೆ. ಸಂಗ್ರಹವಾದ ಮಾಹಿತಿಯನ್ನು ತಾಲ್ಲೂಕು ಆಡಳಿತ ಪರಿಶೀಲಿಸಲಿದೆ’ ಎಂದು ಹೇಳಿದ್ದಾರೆ.

‘ರೈತರು ಸ್ಮಾರ್ಟ್ ಮೊಬೈಲ್‌ ಫೋನ್ ಉಪಯೋಗಿಸಿ ಆ್ಯಪ್‌ ಅನ್ನು ಗೂಗಲ್‌ನ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ರೈತರ ಪರವಾಗಿ ಅವರ ಕುಟುಂಬದ ಸದಸ್ಯರು, ಸಂಬಂಧಿಕರು ಅಥವಾ ಕಂದಾಯ/ ಕೃಷಿ ಇಲಾಖೆಯಿಂದ ನಿಯೋಜನೆಗೊಂಡ ಅದೇ ಗ್ರಾಮದ ಯುವಕರ (ಖಾಸಗಿ ನಿವಾಸಿ/ ಪಿ.ಆರ್) ಸಹಾಯದೊಂದಿಗೆ ನಿರ್ವಹಿಸಬಹುದು. ಮೊಬೈಲ್ ಫೋನ್‌ ಸಂಖ್ಯೆಗೆ ಒ.ಟಿ.ಪಿ. ಪಡೆದು ಮೂಲಕ ಜಮೀನುಗಳಲ್ಲಿನ (ಹಿಸ್ಸಾವಾರು) ಬೆಳೆಗಳ ಮಾಹಿತಿ ದಾಖಲಿಸಬಹುದು’ ಎಂದು ತಿಳಿಸಿದ್ದಾರೆ.

‘ನಿಗದಿತ ಸಮಯದಲ್ಲಿ ಮಾಹಿತಿ ಅಪ್‌ಲೋಡ್ ಮಾಡದಿದ್ದಲ್ಲಿ ಪ್ರತಿ ಗ್ರಾಮಕ್ಕೆ ನಿಯೋಜನೆಗೊಂಡ ಬೆಳೆ ಸಮೀಕ್ಷಕರು ಹೊಲಗಳಿಗೆ ಭೇಟಿ ನೀಡಿ ಮೊಬೈಲ್ ಆ್ಯಪ್‌ ಬಳಸಿ ಮಾಹಿತಿ ದಾಖಲಿಸುತ್ತಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ಸಮೀಕ್ಷೆಯ ಮಾಹಿತಿಯನ್ನು ಸಾಂಖ್ಯಿಕ ಇಲಾಖೆಯ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆ ವಿಸ್ತೀರ್ಣ ಎಣಿಕಾ ಕಾರ್ಯದಲ್ಲಿ ಬಳಸಲು ಅನುಮತಿಸಲಾಗಿದೆ. ಪ್ರಾಕೃತಿಕ ವಿಕೋಪದ ಸಂದರ್ಭ ಬೆಳೆ ಹಾನಿ ಸಹಾಯಧನ ನೀಡಲು ವರದಿ ತಯಾರಿಸಲು ಬಳಸಲಾಗುವುದು. ಬೆಳೆ ವಿಮೆ ಯೋಜನೆಯಡಿ ರೈತರ ತಾಕುವಾರು ಬೆಳೆ ಪರಿಶೀಲನೆಗೆ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮತ್ತು ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನದಲ್ಲಿ ಆಧಾರವಾಗಿ ಇಟ್ಟುಕೊಳ್ಳಲಾಗುವುದು’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು