ಬೆಳಗಾವಿ: ‘ಕೃಷಿ ಇಲಾಖೆ ಮೂಲಕ ಜಿಲ್ಲೆಯ ವಿವಿಧೆಡೆ ವಿತರಿಸಲಾದ ಸೋಯಾಅವರೆ ಬೀಜಗಳು ಕಳಪೆ ಗುಣಮಟ್ಟದವಾಗಿವೆ. ಹೀಗಾಗಿ ಸರ್ಕಾರವು ರೈತರಿಗೆ ಕೂಡಲೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

‘ಬೈಲಹೊಂಗಲ ಹಾಗೂ ಕಿತ್ತೂರು ತಾಲ್ಲೂಕು ಸೇರಿದಂತೆ ವಿವಿಧೆಡೆ ಬೀಜಗಳು ಸಮರ್ಪಕವಾಗಿ ಮೊಳಕೆ ಬಂದಿಲ್ಲ. ಇದರಿಂದ ರೈತರು ನಷ್ಟ ಅನುಭವಿಸಿದ್ದಾರೆ. ಕಳಪೆ ಗುಣಮಟ್ಟದ ಬೀಜ ನೀಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಬೈಲಹೊಂಗಲ ತಾಲ್ಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಲ್ಲಿ ಕೆರೆ ಅಭಿವೃದ್ಧಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಕೆರೆ ಅಭಿವೃದ್ಧಿ ಮಾಡದೆ ವಂಚಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಕೋರಿದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜು ಮರವೆ, ಅನಿಲ ಅನಗೋಳಕರ, ರಮಾಕಾಂತ ಬಾಳೇಕುಂದ್ರಿ, ಹಣಮಂತ ಬಾಳೇಕುಂದ್ರಿ, ಭೂಮೇಶ ಬಿರ್ಜೆ, ನಿತಿನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.