ಶುಕ್ರವಾರ, ಮೇ 27, 2022
21 °C

ಬೆಳಗಾವಿ: ಭೂಸ್ವಾಧೀನ ಪ್ರಕ್ರಿಯೆಗೆ ರೈತರ ವಿರೋಧ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಭಾರತಮಾಲಾ ಯೋಜನೆಯಲ್ಲಿ ಕೈಗೊಳ್ಳುತ್ತಿರುವ ಪಣಜಿ–ಹೈದರಾಬಾದ್ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಬೆಳಗಾವಿ–ಹುನಗುಂದ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು’ ಎಂದು ಒತ್ತಾಯಿಸಿ ರೈತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬಳಿಕ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

‘ಈ ಹೆದ್ದಾರಿ ನಿರ್ಮಾಣಕ್ಕಾಗಿ ಸರ್ಕಾರ ಬೆಳಗಾವಿ ತಾಲ್ಲೂಕಿನ ಬಸ್ತವಾಡ, ಕಮಕಾರಟ್ಟಿ, ಶಗನಮಟ್ಟಿ, ತಾರೀಹಾಳ, ಚಂದನಹೊಸೂರ, ಗಣಿಕೊಪ್ಪ, ಮರಿಕಟ್ಟಿ, ಹಣ್ಣಿಕೇರಿ, ಜಕನಾಯ್ಕನಕೊಪ್ಪ, ನಾಗನೂರ ಮತ್ತಿತರ ಗ್ರಾಮಗಳ ಭೂಮಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ. ಈಗಾಗಲೇ ಹಲವು ಕೈಗಾರಿಕೆಗಳು ಮತ್ತು ರಸ್ತೆಗಳ ನಿರ್ಮಾಣಕ್ಕೆ ಭೂಮಿ ನೀಡಿದ್ದೇವೆ. ಈಗ ಬದುಕಿಗೆ ಆಸರೆಯಾಗಿರುವ ಅತ್ಯಲ್ಪ ಕೃಷಿ ಜಮೀನನ್ನೂ ಸ್ವಾಧೀನಪಡಿಸಿಕೊಳ್ಳಬಾರದು’ ಎಂದು ಆಗ್ರಹಿಸಿದರು.

ಮುಖಂಡರಾದ ಚೂನಪ್ಪ ಪೂಜೇರಿ, ಪ್ರಕಾಶ ನಾಯ್ಕ, ಶಿವಾನಂದ ಮುಗಳಿಹಾಳ, ರಾಜು ಪಾಟೀಲ, ಪುಂಡಲೀಕ ನಾಯ್ಕ, ಗಜಾನನ ನಾಯ್ಕ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.