ಗುರುವಾರ , ಮೇ 26, 2022
31 °C

‘ಶಾಸಕರ ಕಚೇರಿ ಎದುರು ಕೃಷಿ ಉತ್ಪನ್ನ ಮಾರಿ ಪ್ರತಿಭಟನೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಸಕರ ಕಚೇರಿ ಎದುರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಅಧ್ಯಕ್ಷ ಸಿದಗೌಡ ಮೋದಗಿ ತಿಳಿಸಿದರು.

ಇಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ‘ಕೇಂದ್ರ ಸರ್ಕಾರವು ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವುದನ್ನು ಶಾಸನಬದ್ಧಗೊಳಿಸಬೇಕು, ತಿದ್ದುಪಡಿ ಮಾಡಲಾದ ಮೂರು ಕೃಷಿ ಕಾಯ್ದೆಗಳನ್ನು ರಾಜ್ಯದಲ್ಲೂ ವಾಪಸ್ ಪಡೆಯಬೇಕು, ನಗರದಲ್ಲಿ ಆರಂಭಿಸಿರುವ ಜೈ ಕಿಸಾನ್ ಖಾಸಗಿ ಸಗಟು ತರಕಾರಿ ಮಾರುಕಟ್ಟೆ ರದ್ದುಪಡಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮಂಡಿಸಲಾಗುವುದು’ ಎಂದರು.

‘ಏ.11ರಿಂದ 17ರವರೆಗೆ ರೈತ ವಿಶ್ವಾಸ ದ್ರೋಹ ಹೆಸರಿನಲ್ಲಿ ಹಮ್ಮಿಕೊಂಡಿರುವ ಸಪ್ತಾಹದ ಅಂಗವಾಗಿ ವಿನೂತನ ಪ್ರತಿಭಟನೆ ನಡೆಯಲಿದೆ. ಸಂಯುಕ್ತ ಹೋರಾಟ-ಕರ್ನಾಟಕ ನೇತೃತ್ವದಲ್ಲಿ ಹಮ್ಮಿಕೊಂಡಿದ್ದೇವೆ. ಸಪ್ತಾಹವು ಏ.12ರಂದು ಮೈಸೂರಿನಲ್ಲಿ ಉದ್ಘಾಟನೆಗೊಳ್ಳಲಿದೆ. ಏ.13ರಂದು ಜಿ.ಪಂ. ಬಳಿಯ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕಚೇರಿ ಎದುರು ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು. ಏ.16ರಂದು ಹೊಸೂರದಲ್ಲಿರುವ ಶಾಸಕ ಅಭಯ ಪಾಟೀಲ ನಿವಾಸದ ಎದುರು ಪ್ರತಿಭನೆ ನಡೆಸಲಾಗುವುದು’ ಎಂದು ಹೇಳಿದರು.

ಮುಖಂಡರಾದ ರವಿ ಪಾಟೀಲ್, ಸಂತೋಷ ಎಚ್‍.ಎಂ., ಶಿವಲೀಲಾ ಮಿಸಾಳೆ, ಜಿ.ವಿ. ಕುಲಕರ್ಣಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.