ಗುರುವಾರ , ಜೂನ್ 17, 2021
29 °C

ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.

‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ ಗಣಿ, ಕಲ್ಲಪ್ಪ ಕಡೆಮನಿ, ರಾಮಣ್ಣ ಕೆಸರಡ್ಡಿ, ರಮೇಶ ಹಳ್ಳೂರ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.