ಬೆಳಗಾವಿ: ‘ಪ್ರತಿ ಟನ್ ಕಬ್ಬಿಗೆ ಸಕ್ಕರೆ ಕಾರ್ಖಾನೆಯವರು ₹3,500, ಕೇಂದ್ರ ಮತ್ತು ರಾಜ್ಯ ಸರ್ಕಾರ ತಲಾ ₹1 ಸಾವಿರ ಸೇರಿದಂತೆ ಒಟ್ಟು ₹5,500 ದರ ನೀಡಬೇಕು’ ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಇಲ್ಲಿನ ಅಲಾರವಾಡ ಸೇತುವೆ ಬಳಿ ರೈತರು ಗುರುವಾರ ಬೃಹತ್ ಪ್ರತಿಭಟನೆ ಮಾಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ರೈತರು ಪಾಲ್ಗೊಂಡಿದ್ದರು. ಕೆಲ ರೈತ ಮಹಿಳೆಯರು ಬುತ್ತಿ ಕಟ್ಟಿಕೊಂಡು, ಹೋರಾಟಕ್ಕೆ ಬಂದಿದ್ದರು. ಸುಡು ಬಿಸಿಲಲ್ಲೂ ಉತ್ಸಾಹದಿಂದ ಧರಣಿ ನಡೆಸಿದ ರೈತರು, ತಮ್ಮ ಹಕ್ಕೊತ್ತಾಯ ಮಂಡಿಸಿದರು.

ನೇತೃತ್ವ ವಹಿಸಿದ್ದ ಮುಖಂಡರಾದ ಚೂನಪ್ಪ ಪೂಜೇರಿ ಮತ್ತು ಶಶಿಕಾಂತ ಗುರೂಜಿ, ‘ಕಬ್ಬು ಬೆಳೆಯುವ ರೈತರಿಗೆ ನ್ಯಾಯಯುತ ದರ ನೀಡಬೇಕು. ತೂಕದಲ್ಲಿ ಆಗುತ್ತಿರುವ ಮೋಸ ತಪ್ಪಿಸಲು ರಾಜ್ಯದ ಎಲ್ಲ ಕಾರ್ಖಾನೆಗಳಲ್ಲಿ ಸರ್ಕಾರದ ವತಿಯಿಂದಲೇ ಡಿಜಿಟಲ್ ತೂಕದ ಯಂತ್ರ ಅಳವಡಿಸಬೇಕು. ಬೆಳಗಾವಿಯ ಸಕ್ಕರೆ ಆಯುಕ್ತರ ಕಚೇರಿಗೆ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿ ನೇಮಿಸಬೇಕು’ ಎಂದು ಒತ್ತಾಯಿಸಿದರು.

‘ಗ್ರಾಮೀಣ ಭಾಗದಲ್ಲಿ ನೀರಾವರಿ ಪಂಪ್ಸೆಟ್ಗಳಿಗೆ ಹಗಲಿನಲ್ಲೇ 12 ತಾಸು ತ್ರಿಫೇಸ್ ವಿದ್ಯುತ್ ನೀಡಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರಿಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಆಗ್ರಹಿಸಿದರು.

‘ಅಕ್ರಮ, ಸಕ್ರಮ ಯೋಜನೆ ಮುಂದುವರಿಸಬೇಕು. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾಗಿ ದರ ನಿಗದಿಪಡಿಸಬೇಕು. ಕೃಷಿ, ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಿ, ರೈತರಿಗೆ ತ್ವರಿತವಾಗಿ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಬೇಕು’ ಎಂದು ಒತ್ತಾಯಿಸಿದರು.

‘ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಆಗುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು. ಖರೀದಿಗೆ ಹೇರಿದ ಮಿತಿ ಪ್ರಮಾಣ ಹಚ್ಚಿಸಬೇಕು. ರಾಜ್ಯದಲ್ಲಿ ಹೆಚ್ಚಿನ ರೈತರು ಹೈನುಗಾರಿಕೆ ಅವಲಂಬಿಸಿದ್ದಾರೆ. ಹಾಗಾಗಿ ಹಾಲಿನ ಖರೀದಿ ದರ ಹೆಚ್ಚಿಸಬೇಕು’ ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕಾಗಮಿಸಿ ಮನವಿ ಆಲಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ, ‘ರೈತರ ಯಾವುದೇ ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ. ಆದರೆ, ಬಾಗಲಕೋಟೆ ಜಿಲ್ಲೆಯಲ್ಲಿ ರೈತರೇ ಕಬ್ಬಿಗೆ ಬೆಂಕಿ ಹಚ್ಚಬಾರದಿತ್ತು. ಬೆಳಗಾವಿ ಜಿಲ್ಲೆ ಗುರ್ಲಾಪುರ ಕ್ರಾಸ್ನಲ್ಲಿ ನಡೆದ ಹೋರಾಟದಲ್ಲಿ ರೈತರು ಸಂಯಮ ಪ್ರದರ್ಶಿಸಿ ನ್ಯಾಯ ಪಡೆದರು. ಆ ಹೋರಾಟದಿಂದ ಇಡೀ ರಾಜ್ಯದ ರೈತರಿಗೆ ಸಹಾಯವಾಗಿದೆ. ರಿಕವರಿ ಆಧರಿಸಿ ಕಬ್ಬಿಗೆ ದರ ನೀಡುವ ಪ್ರಯತ್ನವನ್ನು ಸರ್ಕಾರ ಮಾಡಿದೆ’ ಎಂದರು.

‘ಕಬ್ಬಿಗೆ ಹೆಚ್ಚಿನ ದರ ಕೊಡಿಸಿದ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ. ನೆರೆಯ ಮಹಾರಾಷ್ಟ್ರದಲ್ಲೂ ಇಷ್ಟೊಂದು ದರ ಸಿಕ್ಕಿಲ್ಲ. ಕಬ್ಬು ಬೆಳೆಗಾರರಿಗೆ ಪ್ರೋತ್ಸಾಹಧನ ಕೊಡಿಸುವುದು ನಮ್ಮ ಜವಾಬ್ದಾರಿ’ ಎಂದು ಹೇಳಿದರು.

‘ಇಂದು ಪಾದರಕ್ಷೆ, ಸಿದ್ಧವಾಡ ಉಡುಪುಗಳಿಗೆ ಸ್ಥಿರವಾದ ದರವಿದೆ. ಆದರೆ, ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸ್ಥಿರವಾದ ದರವಿಲ್ಲ. ನರೇಂದ್ರ ಮೋದಿ ಇನ್ನೂ 10 ವರ್ಷ ಪ್ರಧಾನಿಯಾಗಿದ್ದರೂ ನನ್ನ ಅಭ್ಯಂತರವಿಲ್ಲ. ಆದರೆ, ಕೃಷಿ ಉತ್ಪನ್ನಗಳಿಗೆ ಕೇಂದ್ರದವರು ಯೋಗ್ಯ ದರ ನಿಗದಿಪಡಿಸಲಿ’ ಎಂದು ಹೇಳಿದರು.

‘ವೈಜ್ಞಾನಿಕವಾಗಿ ಕೃಷಿ ಮಾಡಿದರೆ, ಪ್ರತಿ ಎಕರೆಯಲ್ಲಿ 100 ಟನ್ಗಿಂತ ಅಧಿಕ ಪ್ರಮಾಣದಲ್ಲಿ ಕಬ್ಬು ಬೆಳೆಯಬಹುದು. ಆಗ ಯಾವ ಸರ್ಕಾರದ ಮುಂದೆಯೂ ರೈತರು ಕೈ ಒಡ್ಡುವ ಸ್ಥಿತಿ ಬಾರದು. ಆ ದಿಸೆಯತ್ತಲೂ ರೈತರು ಚಿಂತನೆ ನಡೆಸಬೇಕು. ಇನ್ನೂ ಯಾವುದೇ ಬೆಳೆಯ ಧಾರಣಿ ಕುಸಿದಾಗ ತರಾತುರಿಯಲ್ಲಿ ಮಾರಬಾರದು. ಮಾರುಕಟ್ಟೆ ಸ್ಥಿತಿ ಆಧರಿಸಿ ಅವಕಾಶವಿದ್ದಾಗ ಮಾರಬೇಕು’ ಎಂದು ಸಲಹೆ ನೀಡಿದರು.

ಸಿ.ಎಂ ಭೇಟಿಗೆ ತೆರಳಿದ ರೈತರು

‘ನಿಮ್ಮ ಬೇಡಿಕೆಗಳ ಕುರಿತಾಗಿ ಸಿ.ಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಹಾಗಾಗಿ ಸೌಧಕ್ಕೆ ಆಗಮಿಸಬೇಕು’ ಎಂದು ಶಿವಾನಂದ ಪಾಟೀಲ ಕೋರಿದರು. ಇದಕ್ಕೆ ಒಪ್ಪಿದ ರೈತರು ಸುವರ್ಣ ವಿಧಾನಸೌಧಕ್ಕೆ ತೆರಳಿದರು. ಇತ್ತ ಪ್ರತಿಭಟನೆ ಮುಂದುವರಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.