ಗುರುವಾರ , ಅಕ್ಟೋಬರ್ 21, 2021
22 °C

ಬೆಳಗಾವಿಯಲ್ಲಿ ರೈತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ ಬೆಂಬಲಿಸಿ ಕೆಲವು ರೈತ ಮುಖಂಡರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಹಳೆಯ ಟೈರ್ ಸುಟ್ಟು, ಕೇಂದ್ರ ಸರ್ಕಾರದ ನೀತಿ ವಿರುದ್ಧ ಘೋಷಣೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರಾದ ಸಿದಗೌಡ ಮೋದಗಿ, ರಾಘವೇಂದ್ರ ನಾಯ್ಕ ಪಾಲ್ಗೊಂಡಿದ್ದರು.

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಟೋಲ್‌ಗೆ ಮುತ್ತಿಗೆ ಹಾಕಲು ಬಂದ ರೈತರನ್ನು ಪೊಲೀಸರು ‌ವಶಕ್ಕೆ ಪಡೆದರು.

ಪ್ರತಿಭಟನಾನಿರತ 40 ಮಂದಿಯನ್ನು ವಶಕ್ಕೆ ಪಡೆದು ಕರೆದೊಯ್ದರು. ಮುಂಜಾಗ್ರತಾ ಕ್ರಮವಾಗಿ ಟೋಲ್ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕಾಂಗ್ರೆದ್ ಕಿಸಾನ್ ಘಟಕದವರು ಸೇರಿದಂತೆ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು