ಶುಕ್ರವಾರ, ಜೂನ್ 18, 2021
20 °C

ಮಳೆಯಲ್ಲೂ ರೈತರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಶನಿವಾರ ಕರಾಳ ದಿನ ಆಚರಿಸಿದ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮತ್ತು ಮುಖಂಡರು ಇಲ್ಲಿನ ಜಿಲ್ಲಾಧಿಕಾರಿ ಎದುರು ಮಳೆಯ ನಡುವೆಯೇ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿಯ ಗೇಟ್‌ ತೆಗೆದು ಮುತ್ತಿಗೆ ಹಾಕಲು ಯತ್ನಿಸಿದ ಅವರನ್ನು ಪೊಲೀಸರು ತಡೆದರು.

‘ನಮ್ಮ ಭೂಮಿ ನಮಗೆ ಬೇಕು’, ‘ಯಾರಿಗೆ ಬಂತು ಎಲ್ಲಿಗೆ ಬಂತು 47ರ ಸ್ವಾತಂತ್ರ್ಯ?’ ಮೊದಲಾದ ಘೋಷಣೆಗಳನ್ನು ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ರಾಜ್ಯ ಸಂಚಾಲಕಿ ಜಯಶ್ರೀ ಗುರನ್ನವರ, ‘ರಾಜ್ಯ ಸರ್ಕಾರ ಬಂಡವಾಳಶಾಹಿ, ಕಾರ್ಪೊರೇಟ್ ವಲಯ, ರಿಯಲ್‍ಎಸ್ಟೇಟ್ ದಂಧೆಕೋರರ ಪರವಾಗಿ ಕೆಲಸ ಮಾಡುತ್ತಿದೆ. ಹಸಿರು ಶಾಲು ಹಾಕಿಕೊಂಡು ಅಧಿಕಾರ ಸ್ವೀಕರಿಸುವ ಮುಖ್ಯಮಂತ್ರಿ ಉದ್ಯಮಿಗಳ ಪರವಾಗಿ ಮಾತನಾಡುತ್ತಿದ್ದಾರೆ. ರೈತರ ಕೃಷಿ  ಜಮೀನುಗಳನ್ನು ಶ್ರೀಮಂತರ ಪಾಲು ಮಾಡುವುದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ರೈತರಿಗೆ ಮಾರಕವಾದ ತಿದ್ದುಪಡಿಯನ್ನು ಕೈಬಿಡುವವರೆಗೂ ಹೋರಾಟ ಮುಂದುವರಿಸಲಾಗುವುದು’ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.