ಶನಿವಾರ, ಸೆಪ್ಟೆಂಬರ್ 25, 2021
23 °C

ವಿದ್ಯುತ್‌ ಖಾಸಗೀಕರಣಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ವಿದ್ಯುತ್‌ ಖಾಸಗೀಕರಣಕ್ಕೆ ಪೂರಕವಾಗಿರುವ ವಿದ್ಯುಚ್ಛಕ್ತಿ ಕಾಯ್ದೆ (ತಿದ್ದುಪಡಿ) ಮಸೂದೆ-2021 ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಘಟಕದ ಸಂಚಾಲಕ ಚೂನಪ್ಪ ಪೂಜಾರಿ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತ ವಿರೋಧಿ ಕಾನೂನುಗಳಿಂದ ಕುಟುಂಬಗಳು ಬೀದಿಗೆ ಬರುತ್ತಿವೆ. ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ಹೋರಾಟ ಆರಂಭವಾಗಿ ತಿಂಗಳುಗಳೇ ಕಳೆದಿವೆ. ಅದಕ್ಕೆ ಸರ್ಕಾರ ಸ್ಪಂದಿಸಿಲ್ಲ. ಈ ನಡುವೆ, ವಿದ್ಯುತ್ ಖಾಸಗೀಕರಣಕ್ಕೆ ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ರೈತರ ಸಮಾಧಿ ಮೇಲೆ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಇದು ರೈತ ವಿರೋಧಿ ಸರ್ಕಾರ. ಕ್ವಿಟ್ ಇಂಡಿಯಾ ಚಳವಳಿಯಂತೆ, ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂದು ಹೋರಾಟ ಆರಂಭಿಸುತ್ತೇವೆ’ ಎಂದು ತಿಳಿಸಿದರು.

ಸಂಘಟಕಿ ಜಯಶ್ರೀ ಗುರನ್ನವರ ಮಾತನಾಡಿ, ‘ಬಿಜೆಪಿ ಸರ್ಕಾರವು ಜನವಿರೋಧಿ ನೀತಿಗಳ ಮೂಲಕ ರೈತರು ಮತ್ತು ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡುತ್ತಿದೆ’ ಎಂದು ದೂರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.