ಭಾನುವಾರ, ಏಪ್ರಿಲ್ 18, 2021
32 °C

ಬೆಳಗಾವಿ: ಫಸಲ್ ಬಿಮಾ ಯೋಜನೆಯಡಿ ₹ 9.90 ಕೋಟಿ ಮಂಜೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2018ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯ 47,224 ರೈತರು ಪಾಲ್ಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

‘ಬೆಳೆ ಕಟಾವು ಪ್ರಯೋಗಗಳ ಆಧಾರದ ಮೇಲೆ ವಿಮೆ ಪರಿಹಾರ ಮೊತ್ತದ ಲೆಕ್ಕಾಚಾರ ಮಾಡಿದ ನಂತರ, ಈ ಹಂಗಾಮಿಗೆ 9,761 ರೈತರಿಗೆ ಒಟ್ಟು ₹ 9.90 ಕೋಟಿ ವಿಮೆ ಪರಿಹಾರ ಮಂಜೂರಾಗಿದೆ. ಅದರ ಪೈಕಿ ಈಗಾಗಲೇ 6,739 ರೈತರಿಗೆ ₹ 7.57 ಕೋಟಿ ವಿಮೆ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಿದೆ. ಇನ್ನುಳಿದ ರೈತರಿಗೆ ವಿಮಾ ಕಂಪನಿಯಿಂದ ಪರಿಹಾರ ಜಮಾ ಮಾಡುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು