ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕಾಕ: ಮೂವರು ಮಕ್ಕಳಿಗೆ ವಿಷ ಉಣಿಸಿ ತಂದೆ ಆತ್ಮಹತ್ಯೆ

Last Updated 28 ಆಗಸ್ಟ್ 2020, 16:47 IST
ಅಕ್ಷರ ಗಾತ್ರ

ಗೋಕಾಕ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕಡಬಗಟ್ಟಿ ಬೆಟ್ಟದ ಪ್ರದೇಶದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷ ಉಣಿಸಿ, ತಾನೂ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಹುಕ್ಕೇರಿ ತಾಲ್ಲೂಕಿನ ರಾಜಕಟ್ಟಿ ಗ್ರಾಮದ ಮಾರುತಿ ಯಲ್ಲಪ್ಪ ಪೂಜಾರಿ (37), ಮಕ್ಕಳಾದ ಸಮರ್ಥ (8), ಯಲ್ಲಪ್ಪ (6), ಪೂಜಾ (4) ಎಂದು ಗುರುತಿಸಲಾಗಿದೆ.

‘ವ್ಯಕ್ತಿಯು ಅಂಕಲಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಿ ಬರುವುದಾಗಿ ಊರಿನಿಂದ ಹೊರಟಿದ್ದರು ಎಂದು ಗೊತ್ತಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT