ಬೆಳಗಾವಿ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯೇ ನಿರಂತರ ಅತ್ಯಾಚಾರ ಎಸಗಿದ್ದರಿಂದ ಮಗು ಜನಿಸಿದ ಪ್ರಕರಣ ತಡವಾಗಿ ಗೊತ್ತಾಗಿದೆ.

ಘಟನೆ 2023ರ ಫೆಬ್ರವರಿಯಲ್ಲಿ ನಡೆದಿದ್ದು, ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿಯ ತಾಯಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದರಿಂದ ಮನೆಯಲ್ಲಿ ತಂದೆ– ಮಗಳು ಮಾತ್ರ ಇರುತ್ತಿದ್ದರು. ಮಗಳು ಗರ್ಭ ಧರಿಸಿದ ಅನುಮಾನ ಬಂದಿದ್ದರಿಂದ ಗ್ರಾಮದ ಕೆಲವರು ಆಶಾ ಕಾರ್ಯಕರ್ತೆಗೆ ಮಾಹಿತಿ ನೀಡಿದ್ದರು. ಅವರ ಮೂಲಕ ಸರ್ಕಾರೇತರ ಸ್ವಯಂ ಸೇವಾ ಸಂಘಟನೆ (ಎನ್‌ಜಿಒ) ತಂಡ ಪರಿಶೀಲಿಸಿದಾಗ ಯುವತಿ ಗರ್ಭಿಣಿ ಆಗಿರುವುದು ಖಚಿತವಾಯಿತು.

‘ಎನ್‌ಜಿಒ ಸದಸ್ಯರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದರು. ಬುದ್ಧಿಮಾಂದ್ಯೆಗೆ ಜನಿಸಿದ ಮಗು ಹಾಗೂ ಆಕೆಯ ತಂದೆಯ ಡಿಎನ್‌ಎ ಅನ್ನು ಆಗಸ್ಟ್‌ನಲ್ಲಿ ತಪಾಸಣೆ ಮಾಡಲಾಯಿತು. ತಂದೆಯೇ ಮಗಳ ಮೇಲೆ ಅತ್ಯಾಚಾರ ಎಸಗಿದ್ದರಿಂದ ಮಗು ಜನಿಸಿದೆ ಎಂಬುದು ಖಚಿತವಾಯಿತು. ಆರೋಪಿಯನ್ನು ಬಂಧಿಸಿ, ಸೆಪ್ಟೆಂಬರ್‌ನಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಕೂಡ ಸಲ್ಲಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎಸ್.ಎನ್.ಸಿದ್ರಾಮಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.