ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಪ್ಪಾಣಿ: ‘ಹೆಚ್ಚು ಅಂಕ ಗಳಿಕೆಗೆ ಒತ್ತಡ ಹೇರದಿರಿ’

Last Updated 4 ಫೆಬ್ರುವರಿ 2023, 6:05 IST
ಅಕ್ಷರ ಗಾತ್ರ

ನಿಪ್ಪಾಣಿ: ‘ಮಕ್ಕಳು ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು. ಆಗ ದೇಶ-ವಿದೇಶಗಳಲ್ಲಿ ಗುರುತಿಸಿಕೊಳ್ಳುವಂತಹ ಕಾರ್ಯ ಮಾಡಲು ಸಶಕ್ತರಾಗುವರು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಸ್ಥಳೀಯ ಶಿವಶಂಕರ ಜೊಲ್ಲೆ ಪಬ್ಲಿಕ್ (ಸಿಬಿಎಸ್‍ಇ) ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮಕ್ಕಳಿಗೆ ಅತಿ ಹೆಚ್ಚು ಅಂಕ ಪಡೆಯುವಂತೆ ಒತ್ತಡ ಹೇರಬಾರದು. ಮಕ್ಕಳಿಗೆ ನಿತ್ಯ ಯೋಗ, ಪ್ರಾಣಾಯಮ ಮಾಡುವಂತೆ ಹೇಳಬೇಕು ಹಾಗೂ ಅವರು ಮಾಡಬೇಕು’ ಎಂದರು.

ಸಾನ್ನಿಧ್ಯ ವಹಿಸಿದ್ದ ಸ್ಥಳೀಯ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಚೇರ್ಮನ್ ಸಹಕಾರ ರತ್ನ ಚಂದ್ರಕಾಂತ ಕೋಠಿವಾಲೆ ಮಾತನಾಡಿದರು. ಪ್ರಾಚಾರ್ಯೆ ಊರ್ಮಿಲಾ ಚೌಗುಲೆ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳು, ಮಕ್ಕಳು ಆಕರ್ಷಕವಾಗಿ ನೃತ್ಯ ಮಾಡಿದರು.

ಜ್ಯೋತಿಪ್ರಸಾದ ಜೊಲ್ಲೆ, ಪ್ರಿಯಾ ಜೊಲ್ಲೆ, ಹಾಲಶುಗರ್ ಸಂಚಾಲಕ ಆರ್.ವೈ. ಪಾಟೀಲ, ನಗರಸಭೆಯ ಉಪಾಧ್ಯಕ್ಷೆ ನೀತಾ ಬಗಾಡೆ, ರಾಜೇಂದ್ರ ಗುಂದೇಶಾ, ಪ್ರಣವ ಮಾನವಿ, ರಾಘವೇಂದ್ರ ಬಗಾಡೆ ಸೇರಿದಂತೆ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT